ಡಿ.22, 23ರಂದು ದಡ್ಡಲಕಾಡು ಸರಕಾರಿ ಶಾಲೆ ಮೇಲಂತಸ್ತಿನ ಲೋಕಾರ್ಪಣೆ

ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್‌ನ ದತ್ತು ಯೋಜನೆಯಡಿ ನಿರ್ಮಾಣಗೊಂಡಿರುವ ದಡ್ಡಲಕಾಡುವಿನ ದ.ಕ. ಜಿ.ಪಂ. ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೇಲಂತಸ್ತಿನ ಕಟ್ಟಡದ ಲೋಕಾರ್ಪಣೆ ಸಮಾರಂಭ ಡಿ.22 ಮತ್ತು 23ರಂದು ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಜಾಹೀರಾತು

ಶನಿವಾರ ಸಂಜೆ ಶಾಲೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಮಾಹಿತಿ ನೀಡಿದ ಅವರು, ನನ್ನ ಲೋಕ ಸಭಾ ಕ್ಷೇತ್ರದಲ್ಲಿ ಇಂತಹ ಶಿಕ್ಷಣ ಸಂಸ್ಥೆಯಿರುವುದು ನನಗೆ ಹೆಮ್ಮೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವ್ಡೇಕಾರ್ ಅವರನ್ನು ಕರೆಸಿಕೊಳ್ಳಲು ಪ್ರಯತ್ನ ನಡೆಸುತ್ತಿರುವುದಾಗಿ ಅವರು ತಿಳಿಸಿದರು.

ಶಿಕ್ಷಕರ ಭರ್ತಿಗೆ ಬೇಡಿಕೆ:

ವಿದ್ಯಾರ್ಥಿಗಳು ಹೆಚ್ಚಿರುವ ಸರಕಾರಿ ಶಾಲೆಗಳಲ್ಲಿ ಕಾಯಂ ಶಿಕ್ಷಕರನ್ನು ನೇಮಿಸುವ ವಿಚಾರವಾಗಿ ಬೇಡಿಕೆ ಇರಿಸಲಾಗುವುದು ಎಂದ ನಳಿನ್, ಹಾಗೂ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದ್ದು, ಇದು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಾಗಲು ಕಾರಣವಾಗಿದೆ. ಹೀಗಾಗಿ ಕೆಲ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಇದೆ. ಆದರೆ ಇಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ. ಇದಕ್ಕೆ ದಡ್ಡಲಕಾಡು ಶಾಲೆಯನ್ನು ದೇಶದಲ್ಲಿಯೇ ಮಾದರಿ ಶಾಲೆಯನ್ನಾಗಿ ರೂಪಿಸಿ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ ಅಂಚನ್ ಅವರ ನೇತೃತ್ವದಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಸಾಧಿಸಿ ತೋರಿಸಿದೆ. ಸರಕಾರ ಅಥವಾ ಜನಪ್ರತಿನಿಧಿಗಳಿಂದ ಅನುದಾನ ಪಡೆಯದೆ ದಾನಿಗಳ ನೆರವಿನಿಂದ ಮಾದರಿಯಾಗಿ ಶಾಲೆ ಕಟ್ಟಡ ನಿರ್ಮಿಸಿದ್ದಾರೆ. 10 ಹೆಚ್ಚುವರಿ ಶಿಕ್ಷಕರನ್ನು ಖಾಸಗಿಯಾಗಿ ನೇಮಿಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಇಲ್ಲಿ ಕಲ್ಪಿಸಿಕೊಂಡಿದ್ದಾರೆ ಈ ಕಾರಣದಿಂದಾಗಿಯೇ ಈ ಪರಿಸರದಲ್ಲಿ ಸಾಕಷ್ಟು ಖಾಸಗಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳು ಇದ್ದರೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರಾ, ಹರಿಕೃಷ್ಣ ಬಂಟ್ವಾಳ್, ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷೆ ಸುಮಿತ್ರ ಯೋಗೀಶ್ ಕುಲಾಲ್, ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಗೌಡ, ಸದಸ್ಯರಾದ ಪೂವಪ್ಪ ಮೆಂಡನ್, ಸಂಜೀವ ಪೂಜಾರಿ ಪಿಲಿಂಗಾಲು, ರೂಪ ಲೋಕನಾಥ, ಜಿ.ಆನಂದ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ ಪುರುಷೋತ್ತಮ ಅಂಚನ್ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಡಿ.22, 23ರಂದು ದಡ್ಡಲಕಾಡು ಸರಕಾರಿ ಶಾಲೆ ಮೇಲಂತಸ್ತಿನ ಲೋಕಾರ್ಪಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*