ಬಂಟ್ವಾಳ

ನ.16ರಂದು ನಂದಾವರ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಧಕರಿಗೆ ಸನ್ಮಾನ

ನಂದಾವರ ಶ್ರೀ  ವಿನಾಯಕ ಹಾಗೂ  ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ 38 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವ ಹಾಗೂ ಮಾಗಣೆಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನ.16 ರಂದು ನಡೆಯಲಿದೆ ಎಂದು ದೇವಳದ ವ್ತವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ತಿಳಿಸಿದ್ದಾರೆ.

ಜಾಹೀರಾತು

ಶನಿವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,1980 ರಿಂದ ಪ್ರತಿ ವರ್ಷ ನವಂಬರ್  ತಿಂಗಳ ವೃಶ್ಚಿಕ ಸಂಕ್ರಮಣವನ್ನು ವಾರ್ಷಿಕಸತ್ಯನಾರಾಯಣ ಪೂಜೆಯನ್ನು ಆಚರಿಸಲಾಗುತ್ತಿದೆ ಎಂದರು.

ಕರ್ಣಾಟಕ ಬ್ಯಾಂಕ್ ನ ನಿವೃತ್ತ ಅಧ್ಯಕ್ಷ ಅನಂತಕೃಷ್ಣ, ಧಾರ್ಮಿಕ ಸಂಘಟಕ,ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಎಚ್.ಪೂವಪ್ಪ ಸಪಲಿಗ, ನಾಗಸ್ವರ ವಾದಕ ಚಂದ್ರನಾಥ ಜೋಗಿ ಸಜಿಪ, ಪಣೋಲಿಬೈಲ್ ಕ್ಷೇತ್ರದ ಬಾಬು ಮೂಲ್ಯ ಅವರನ್ನು ಸನ್ಮಾನಿಸಲಾಗುವುದು ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ವಹಿಸಲಿದ್ದು, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾಪಂ ಸದಸ್ಯೆ ನಸೀಮಾ ಬೇಗಂ, ಸಜಿಪ ಮುನ್ನೂರು ಪಂ.ಅಧ್ಯಕ್ಷ ಶರೀಫ್ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಹಲವು ಅಭಿವೃದ್ದಿ ಕಾರ್ಯನಡೆದಿದ್ದು, ಇನ್ನಷ್ಟು ಕಾಮಗಾರಿಗಳು ನಡೆಯಲಿದೆ ಎಂದರು ಕ್ಷೇತ್ರದ ಮುಖ್ಯ ಅರ್ಚಕ ಮಹೇಶ್ ಭಟ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts