ವಿಜಯಾ ಬ್ಯಾಂಕ್ ಅನ್ನು ದೇನಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಮಾಡುವುದನ್ನು ವಿರೋಧಿಸಿ ಹಾಗೂ ನೋಟು ಅಮಾನ್ಯಗೊಳಿಸಿದ ಪ್ರಕ್ರಿಯೆಯನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ.16ರಂದು ಬಿ.ಸಿ.ರೋಡಿನ ವಿಜಯಾ ಬ್ಯಾಂಕ್ ಮುಂಭಾಗ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಿದೆ.
ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ನೀತಿ ವಿರುದ್ಧ ಜಾಗೃತರಾಗಬೇಕು ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.