ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಎಚ್.ಎನ್. ಅನಂತಕುಮಾರ್ (59) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಹಿತ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ. ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಜೊತೆಗೆ ಸರಕಾರಿ ಕಚೇರಿಗಳಿಗೂ ಒಂದು ದಿನಗಳ ರಜೆಯನ್ನು ಘೋಷಿಸಿದ್ದು ಮೂರು ದಿನಗಳ ಕಾಲ ಶೋಕಾಚರಣೆಯನ್ನು ನಡೆಸಲಿದೆ.
ಬೆಳಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಅನಂತ ಕುಮಾರ್ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…