ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಮೃತಪಟ್ಟಿದ್ದಾರೆ. ತೊಕ್ಕೊಟ್ಟಿನಿಂದ ಮಂಗಳೂರಿಗೆ ತೆರಳುವ ದಾರಿಯ ಆಡಂಕುದ್ರು ಶಾಲೆ ಬಳಿ ಇಂದು ಬೆಳಗ್ಗೆ 9.30ಕ್ಕೆ ಘಟನೆ ನಡೆದಿದ್ದು, ಬೈಕ್ ಸವಾರ ವೇಗದಲ್ಲಿ ಬಂದು ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಈ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಆಟೋ ಚಾಲಕ ಗಾಯಗೊಂಡ ವ್ಯಕ್ತಿಯನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ಸಂದರ್ಭ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಸಾಗಿದೆ.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…