ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ನವೆಂಬರ್ 20 ಕೊನೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ನವೆಂಬರ್ 17 ಮತ್ತು 18ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನೋಂದಣಿ ಅಭಿಯಾನವು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ.
ಅರ್ಹತೆಗಳು: 01-01-2019 ರ ಅರ್ಹತಾ ದಿನಾಂಕದಂತೆ 18 ವರ್ಷ ವಯೋಮಾನದ ಭಾರತೀಯ ಪ್ರಜೆಯಾಗಿರಬೇಕು. ಆಯಾ ವಿಧಾನಸಭಾ ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರಬೇಕು.
ಅಗತ್ಯವಿರುವ ದಾಖಲೆಗಳು: ವಯಸ್ಸಿನ ಬಗ್ಗೆ ದಾಖಲೆಗಳು- ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್ ಪೋರ್ಟ್, ಎಸ್.ಎಲ್.ಸಿ./ಪಿ.ಯು.ಸಿ ಅಂಕಪಟ್ಟಿಗಳು, ಪಾನ್‍ಕಾರ್ಡ್, ಹಾಗೂ ವೈದ್ಯಕೀಯ ಪ್ರಮಾಣ ಪತ್ರ.
ವಾಸಸ್ಥಳದ ಬಗ್ಗೆ ದಾಖಲೆಗಳು: ಪಡಿತರ ಚೀಟಿ, ಆಧಾರ್ ಕಾರ್ಡು, ರಹವಾಸಿ ಪತ್ರ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರ ದಾಖಲೆಗಳು. ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು.
ಯಾವುದಕ್ಕೆ ಯಾವ ಅರ್ಜಿ :-
ಸಾರ್ವಜನಿಕರು ಮತದಾರರ ಮಿಂಚಿನ ಅಭಿಯಾನದ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಪ್ರಕಟಣೆ ತಿಳಿಸಿದೆ.