ಸರ್ಕಾರಿ ಕಚೇರಿ

ವಿಶ್ವ ಶೌಚಾಲಯ ದಿನ : ತಾಪಂನಲ್ಲಿ ಪೂರ್ವಭಾವಿ ಸಭೆ

ವಿಶ್ವ ಶೌಚಾಲಯ ದಿನ ಕಾರ್ಯಕ್ರಮ ದ ಪೂರ್ವಭಾವಿ ಸಭೆ ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ ಅದ್ಯಕ್ಷ ತೆಯಲ್ಲಿ ಉಪಾಧ್ಯಕ್ಷ ಅಬ್ಬಾಸ್ ಆಲಿ ಉಪಸ್ಥಿತಿಯಲ್ಲಿ  ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ನಡೆಯಿತು.

ನ .19 ರಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್ ನಾರಾಯಣಗುರು ವೃತ್ತದ ಬಳಿ ಇರುವ ಉದ್ಯಾನವನ ಸಮೀಪದ ಖಾಸಗಿ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನ ನಡೆಸುವ ಬಗ್ಗೆ ದಿನ ನಿಗದಿಯಾಗಿದ್ದು ಈ ಕಾರ್ಯಕ್ರಮ  ಯಶಸ್ವಿಯಾಗಲು ಪಿ.ಡಿ.ಒ.ಮತ್ತು ಕಾರ್ಯದರ್ಶಿ ಗಳ ಸಹಕಾರ ಅಗತ್ಯವಾಗಿ ಬೇಕಾಗಿದೆ ಎಂದು ಇ.ಒ.ರಾಜಣ್ಣ ತಿಳಿಸಿದರು.

ಈ ಕಾರ್ಯಕ್ರಮ ದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅದ್ಯಕ್ಷೆ ಧನಲಕ್ಮೀ ಸಿ ಬಂಗೇರ, ತಾ.ಪಂ.ಇಒ, ಬಂಟ್ವಾಳ ತಹಶೀಲ್ದಾರ, ಹಾಗೂ ಎಲ್ಲಾ ತಾಲೂಕು ಮಟ್ಟದ ಅಧಿಕಾರಿ ಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ