ವಿಶ್ವ ಶೌಚಾಲಯ ದಿನ ಕಾರ್ಯಕ್ರಮ ದ ಪೂರ್ವಭಾವಿ ಸಭೆ ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ ಅದ್ಯಕ್ಷ ತೆಯಲ್ಲಿ ಉಪಾಧ್ಯಕ್ಷ ಅಬ್ಬಾಸ್ ಆಲಿ ಉಪಸ್ಥಿತಿಯಲ್ಲಿ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ನಡೆಯಿತು.
ನ .19 ರಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್ ನಾರಾಯಣಗುರು ವೃತ್ತದ ಬಳಿ ಇರುವ ಉದ್ಯಾನವನ ಸಮೀಪದ ಖಾಸಗಿ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನ ನಡೆಸುವ ಬಗ್ಗೆ ದಿನ ನಿಗದಿಯಾಗಿದ್ದು ಈ ಕಾರ್ಯಕ್ರಮ ಯಶಸ್ವಿಯಾಗಲು ಪಿ.ಡಿ.ಒ.ಮತ್ತು ಕಾರ್ಯದರ್ಶಿ ಗಳ ಸಹಕಾರ ಅಗತ್ಯವಾಗಿ ಬೇಕಾಗಿದೆ ಎಂದು ಇ.ಒ.ರಾಜಣ್ಣ ತಿಳಿಸಿದರು.
ಈ ಕಾರ್ಯಕ್ರಮ ದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅದ್ಯಕ್ಷೆ ಧನಲಕ್ಮೀ ಸಿ ಬಂಗೇರ, ತಾ.ಪಂ.ಇಒ, ಬಂಟ್ವಾಳ ತಹಶೀಲ್ದಾರ, ಹಾಗೂ ಎಲ್ಲಾ ತಾಲೂಕು ಮಟ್ಟದ ಅಧಿಕಾರಿ ಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…