ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬಂಟ್ವಾಳದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ನವೆಂಬರ್ 25ರಂದು ನಡೆಯಲಿದೆ. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಉದ್ಘಾಟನೆ ನೆರವೇರಿಸಲಿದ್ದು, ಈ ಸಂದರ್ಭ ಸಂದರ್ಭ 94ಸಿ ಹಕ್ಕುಪತ್ರಗಳನ್ನು ತಾಲೂಕಿನ ಎಲ್ಲರಿಗೂ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ, ಈ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಬುಧವಾರ ನಡೆಯಿತು.
ಈ ಸಂದರ್ಭ ಸ್ಥಳದಲ್ಲಿದ್ದ ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ಮತ್ತು ಮುಖ್ಯಾಧಿಕಾರಿ ರೇಖಾ ಶೆಟ್ಟಿ ಅವರೊಂದಿಗೆ ಮಾತನಾಡಿದ ಶಾಸಕ, ಹಲವು ಸಲಹೆ ಸೂಚನೆಗಳನ್ನು ನೀಡಿದರು. ತಹಶೀಲ್ದಾರ್ ಪುರಂದರ ಹೆಗ್ಡೆ, ಕಂದಾಯ, ಪುರಸಭೆ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
Be the first to comment on "ಇಂದಿರಾ ಕ್ಯಾಂಟೀನ್ ಕಾಮಗಾರಿ ಶಾಸಕರಿಂದ ಪರಿಶೀಲನೆ"