ಬಂಟ್ವಾಳ

ಮೆಲ್ಕಾರಿನಲ್ಲಿ ಸೀರತ್ ಸಾರ್ವಜನಿಕ ಸಭೆ

ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಶಾಖೆಯ ವತಿಯಿಂದ ನ. 23, 24ರಂದು ಸಂಜೆ 6.30 ಕ್ಕೆ ಸೀರತ್ ಸಾರ್ವಜನಿಕ ಸಭೆಯು ಮೆಲ್ಕಾರ್ ಜಂಕ್ಷನ್‌ನಲ್ಲಿ ಜರಗಲಿದೆ.

ಸಾಂಧೀಪಿನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರು ಸಾರ್ವಜನಿಕ ಸಭೆಯನ್ನು ಉದ್ಘಾಟಿಸುವರು. ಪ್ರವಾದಿ ಮುಹಮ್ಮದ್ ಶ್ರೇಷ್ಠ ಮಾರ್ಗ ದರ್ಶಕ ಎಂಬ ವಿಷಯದಲ್ಲಿ ಶಾಂತಿ ಪ್ರಕಾಶನ ಮಂಗಳೂರು ವ್ಯವಸ್ಥಾಪಕ ಮುಹಮ್ಮದ್ ಕುಂಞಿ ಭಾಷಣ ಮಾಡುವರು. ಹಿದಾಯ ಫೌಂಡೇಶನ್ ಮಂಗಳೂರು ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ದಾಮೋದರ್ ಮೆಲ್ಕಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಜಾಹೀರಾತು

ನ. ೨೪ರಂದು ಸಂಜೆ ೬:೩೦ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ “ಕೆಡುಕು ಮುಕ್ತ ಸಮಾಜ ಕುರಾನಿನ ಬೆಳಕಿನಲ್ಲಿ” ಎಂಬ ವಿಷಯದಲ್ಲಿ ಸದ್ಭಾವನಾ ವೇದಿಕೆ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಪ್ರಧಾನ ಭಾಷಣ ಮಾಡುವರು.

ಮುಖ್ಯ ಅತಿಥಿಗಳಾಗಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್, ರಘು ಸಪಲ್ಯ ಹಾಗೂ ಎಂ.ಎಚ್ ಇಕ್ಬಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಸಂಘದ ಕಾರ್ಯದರ್ಶಿ ಇಬ್ರಾಹಿಂ ಹಾಗೂ ಮಾಧ್ಯಮ ಕಾರ್ಯದರ್ಶಿ ಸಲೀಮ್ ಬೋಳಂಗಡಿ ಅವರು ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts