ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸವನ್ನು ನಡೆಸುತ್ತಿದ್ದು, ಬಂಟ್ವಾಳದಿಂದಲೇ ಆರಂಭಿಸುತ್ತಿದ್ದೇನೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಹೇಳಿದ್ದಾರೆ.
ಬಂಟ್ವಾಳ ಕ್ಷೇತ್ರ ಬಿಜೆಪಿ ಕಚೇರಿಗೆ ಶನಿವಾರ ಭೇಟಿ ನೀಡಿದ ಸಂದರ್ಭ ಪಕ್ಷದ ನಾಯಕರು, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷ ಸಂಘಟನೆ ಬಲಿಷ್ಠಗೊಳಿಸಲು ಕಾರ್ಯಕರ್ತರ ಪಾತ್ರ ಮಹತ್ವದ್ದು ಎಂದರು.
ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ರಾಮನಗರ ಜಿಲ್ಲಾಧ್ಯಕ್ಷ ರುದ್ರೇಶ್, ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ, ಜಿಲ್ಲಾ ಪ್ರಮುಖರಾದ ಜಿ.ಆನಂದ, ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ದ.ಕ.ಜಿಲ್ಲೆ ಬಿಜೆಪಿ ಯುವ ಮೋರ್ಚಾ ಪ್ರ. ಕಾರ್ಯದರ್ಶಿ ಸಂದೇಶ್ ಶೆಟ್ಟಿ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಶೆಟ್ಟಿ ಮರವೂರು, ಜಿಲ್ಲಾ ಕಾರ್ಯದರ್ಶಿ ಸುದರ್ಶನ ಬಜ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಉಪಾಧ್ಯಕ್ಷ ವಿನೀತ್ ಶೆಟ್ಟಿ ಪೆರಾಜೆ, ಕಾರ್ಯದರ್ಶಿ ಸುರೇಶ್ ಕೋಟ್ಯಾನ್, ಲೋಕೇಶ್ ಭರಣಿ, ರೂಪೇಶ್ ಆಚಾರ್ಯ, ಕಾರ್ತಿಕ್ ಬಲ್ಲಾಳ್, ಕ್ಷೇತ್ರ ನಾಯಕರಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಮೋನಪ್ಪ ದೇವಸ್ಯ ಮತ್ತಿತರರು ಉಪಸ್ಥಿತರಿದ್ದರು