ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನವೆಂಬರ್ 26ರ ಸೋಮವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮವನ್ನು ನ.29ಕ್ಕೆ ಮುಂದೂಡಲಾಗಿದೆ.
ಈ ವಿಷಯವನ್ನು ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಮಾಜಿ ಸಚಿವ ಜಾಫರ್ ಶರೀಫ್ ಮತ್ತು ಚಿತ್ರನಟ, ಮಾಜಿ ಸಚಿವ ಅಂಬರೀಶ್ ನಿಧನ ಹೊಂದಿದ ಹಿನ್ನೆಲೆಯಲ್ಲಿ ಶೋಕಾಚರಣೆ ಪ್ರಯುಕ್ತ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಎರಡೂ ನಾಯಕರಿಗೂ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಿರುವ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ, ಉಭಯ ನಾಯಕರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ಧಾರೆ.
Jafar Shareef
Ambareesh
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…