ಬಂಟ್ವಾಳ

ಯುವಜನತೆ ದಾರಿತಪ್ಪದಂತೆ ನೋಡಿಕೊಳ್ಳಬೇಕಾಗಿರುವುದು ನಮ್ಮ ಹೊಣೆಗಾರಿಕೆ

ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಶಾಖೆಯ ವತಿಯಿಂದ ಪ್ರವಾದಿ ಮುಹಮ್ಮದ್ (ಸ): ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ ಎಂಬ ರಾಜ್ಯವ್ಯಾಪಿ ಸೀರತ್ ಅಭಿಯಾನದ ಅಂಗವಾಗಿ ಎರಡು ದಿನಗಳ ಸೀರತ್ ಸಾರ್ವಜನಿಕ ಸಭೆಯ ಸಮಾರೋಪ ಮೆಲ್ಕಾರ್ ಜಂಕ್ಷನ್‌ನಲ್ಲಿ ಶನಿವಾರ ರಾತ್ರಿ ನಡೆಯಿತು.

ಜಾಹೀರಾತು

ಸಾಂಧೀಪಿನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರು ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಈ ಸಮಾಜ ಯಾಂತ್ರಿಕ ಯುಗದಲ್ಲಿ ಬದುಕುತ್ತಿದ್ದು, ಇಲ್ಲಿ ಮಾನವೀಯ ಸಂಸ್ಕೃತಿ ದಿನೇ ದಿನೇ ಕ್ಷೀಣಿಸುತ್ತಿದೆ ಎಂದು ವಿಷಾದವ್ಯಕ್ತಪಡಿಸಿದರು.

ಧರ್ಮ ಆತ್ಮಶಕ್ತಿಯನ್ನು ತುಂಬುವ ಕೆಲಸ ಮಾಡುತ್ತಿದೆ. ಆದರೆ, ಯುವ ಜನತೆ ಕೆಟ್ಟ ಚಟಗಳಿಗೆ ಸಿಲುಕಿ, ತಮ್ಮ ಆತ್ಮಶಕ್ತಿಯ ಕೊರತೆಯಿಂದ ಆತ್ಮಹತ್ಯೆಯಂತಹ ದುಷ್ಕೃತ್ಯಕ್ಕೆ ಬಲಿಯಾಗುತ್ತಿದ್ದಾರೆ ಎಂದು ಹೇಳಿದರು.

ಪೋಷಕರು ತಮ್ಮ ಮಕ್ಕಳಿಗೆ ಡಾ. ಅಬ್ದುಲ್ ಕಲಾಂ ಅವರ ದೇಶಭಕ್ತಿ ಹಾಗೂ ಅಬ್ರಹಂ ಲಿಂಕನ್ ಅವರ ಮಾತೃ ಪ್ರೇಮವನ್ನು ಕಲಿಸಕೊಡಬೇಕಾಗಿದೆ ಎಂದರು.

ಸದ್ಭಾವನಾ ವೇದಿಕೆ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಅವರು “ಕೆಡುಕು ಮುಕ್ತ ಸಮಾಜ ಕುರಾನಿನ ಬೆಳಕಿನಲ್ಲಿ” ಎಂಬ ವಿಷಯದಲ್ಲಿ ಮಾತನಾಡಿ, ಹಿಂದಿನ ಕಾಲದಲ್ಲಿ ಮದ್ಯವನ್ನು ಕದ್ದುಮುಚ್ಚಿ ಹಾಗೂ ನಾಚಿಕೆಯಿಂದ ಪಾನ ಮಾಡುತ್ತಿದ್ದರು. ಪ್ರಸ್ತುತ ದಿನಗಳಲ್ಲಿ ಮದ್ಯಪಾನ ಉದ್ಯೋಗವಾಗಿಯೂ ಹಾಗೂ ಫ್ಯಾಷನ್ ಆಗಿ ಬೆಳೆದು ನಿಂತಿರುವುದು ಖೇದಕರ ಎಂದರು.

ಇಸ್ಲಾಂನಲ್ಲಿ ಅಮಲು ಭರಿಸುವ ಎಲ್ಲಾ ಪದಾರ್ಥಗಳನ್ನು  ನಿಷೇಧಿಸಲಾಗಿದೆ. ಇತರ ಧರ್ಮದ ಮುಖಂಡರು ಜವಾಬ್ದಾರಿ ವಹಿಸಿ, ಮದ್ಯಪಾನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿದೆ. ಇದಕ್ಕೆ ಸರಕಾರವು ಸಹಕಾರವೂ ಅಗತ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಬೋಳಂಗಡಿ ಹವ್ವಾ ಜುಮಾ ಮಸೀದಿ ಖತೀಬ್ ಯಹ್ಯಾ ತಂಙಳ್ ಮದನಿ, ಧಾರ್ಮಿಕ ಮುಂದಾಳು ಕೈಯೂರು ನಾರಾಯಣ ಭಟ್, ಗಾಣಿಗ ಸೇವಾ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ರಘು ಸಪಲ್ಯ ಹಾಗೂ ಎಂ.ಎಚ್ ಇಕ್ಬಾಲ್ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಸ್ವಾಮೀಜಿ ಅವರನ್ನು ಗೌರವಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago