ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲಪಡ್ನೂರು ಕೊಡುಂಗಾಯಿ ಶಿಕ್ಷಕರೊಬ್ಬರ ಮನೆಯ ಹಿಂಬದಿ ಬಾಗಿಲು ಮುರಿದು ಮತ್ತೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, 10 ಸಾವಿರ ನಗದು ದೋಚಿರುವ ಬಗ್ಗೆ ಶನಿವಾರ ದೂರು ದಾಖಲಾಗಿದೆ.
ಜಾಹೀರಾತು
ವಿಟ್ಲಪಡ್ನೂರು ಕೊಡುಂಗಾಯಿ ನಿವಾಸಿ ಗೋಳ್ತಮಜಲು ಶಾಲಾ ಶಿಕ್ಷಕ ಪ್ರಭಾಕರ ಶೆಟ್ಟಿ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಬೆಳಗಿನ ಸಮಯದಲ್ಲೇ ಕಳ್ಳತನ ಆಗಿದೆ. ಪತ್ನಿಯೂ ಶಿಕ್ಷಕಿಯಾಗಿದ್ದು, ಮಕ್ಕಳ ಶಾಲೆಗೆ ಹೋಗಿದ್ದರು. ಬೆಳಗ್ಗೆ ಹೋದವರು ಸಂಜೆ ಮನೆಗೆ ಹಿಂತಿರುಗಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ವಿಟ್ಲ ಉಪನಿರೀಕ್ಷಕ ಯಲ್ಲಪ್ಪ ಅವರನ್ನೊಳಗೊಂಡ ತಂಡ ಬೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅ.23ರಂದು ವಿಟ್ಲ ಪತ್ರಕರ್ತ ರಮೇಶ್ ಕೆ ಅವರ ಬೊಬ್ಬೆಕೇರಿ ಬಾಡಿಗೆ ಮನೆಯಲ್ಲಿ ನಡೆದ ಕಳ್ಳತನಕ್ಕೂ ಈ ಪ್ರಕರಣಕ್ಕೂ ಸಾಮ್ಯತೆ ಇದೆ ಎನ್ನಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಿಟ್ಲದಲ್ಲಿ ಮತ್ತೆ ಕಳ್ಳರ ಕೈಚಳಕ, ಬಾಗಿಲು ಮುರಿದು ನಗದು ದೋಚಿದ ಚೋರರು"
Be the first to comment on "ವಿಟ್ಲದಲ್ಲಿ ಮತ್ತೆ ಕಳ್ಳರ ಕೈಚಳಕ, ಬಾಗಿಲು ಮುರಿದು ನಗದು ದೋಚಿದ ಚೋರರು"