ಬಂಟ್ವಾಳ

ಯುವವಾಹಿನಿಯಿಂದ ರಕ್ತದಾನ, ಉಚಿತ ಆರೋಗ್ಯ ತಪಾಸಣೆ

 

ಸಾಮಾಜಿಕ ಹಾಗೂ ದೈಹಿಕ ಆರೋಗ್ಯಇವೆರಡೂ ಪ್ರಾಮುಖ್ಯವಾದುದು. ನಿಟ್ಟಿನಲ್ಲಿ ಯುವ ಸಂಘಟನೆಗಳು ಹೆಚ್ಚು ಕ್ರಿಯಾಶೀಲರಾಗಿ ಕಾರ್ಯಕ್ರಮ ರೂಪಿಸಬೇಕು. ಯುವವಾಹಿನಿಯಂಥ ಸಂಘಟನೆಗಳು ಕುರಿತು ಹೆಚ್ಚು ಸಕಾರಾತ್ಮಕವಾಗಿ ಆಲೋಚಿಸುತ್ತಿರುವುದು ಶ್ಲಾಘನೀಯ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ತಿಳಿಸಿದರು.

ಜಾಹೀರಾತು

ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ.ರೋಡಿ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ ವಿದ್ಯಾನಿ ಟ್ರಸ್ಟ್, ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ..ಜಿಲ್ಲಾ ರಕ್ತ ನಿ ಘಟಕ ಲೇಡಿಗೋಷನ್ ಆಸ್ಪತ್ರೆ ಮಂಗಳೂರು, . ಜೆ. ಆಸ್ಪತ್ರೆ ಮಂಗಳೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನುಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ  ಶಿವಾನಂದ ಎಂ. ವಹಿಸಿದ್ದರು.

ಇಂಡಿಯನ್ರೆಡ್ಕ್ರಾಸ್ ಸೊಸೈಟಿಯ ಮುಖ್ಯಸ್ಥರಾದ ಎಡ್ವರ್ಡ್ ವಾಸ್, ಬ್ಲಡ್ ಡೋನರ್ ಕ್ಲಬ್ ಕೈಕಂಬ ಮುಖ್ಯಸ್ಥ ಅಬ್ದುಲ್ ಖಾದರ್, ಯುವವಾಹಿನಿ  ಬಂಟ್ವಾಳ ಆರೋಗ್ಯ ನಿರ್ದೇಶಕರಾದ ನಾರಾಯಣ ಪಲ್ಲಿಕಂಡ, ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ಮುಖ್ಯಸ್ಥೆ ವಿದ್ಯಾ ನಾಯ್ಕ್ ಹಾಗೂ ಪ್ರಾಥಮಿಕ ಶಾಲಾ ಮುಖ್ಯಸ್ಥೆ ಸುನಿತಾ, ಶಿಬಿರ ಸಂಚಾಲಕಿ ಸ್ನೇಹಾ ಸುರೇಶ್ ಉಪಸ್ಥಿತರಿದ್ದರು. ಶಿಬಿರ ಸಂಚಾಲಕರಾದ  ಲೋಕೇಶ್ ಸುವರ್ಣ ಸ್ವಾಗತಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಜತೆ ಕಾರ್ಯದರ್ಶಿ  ರಚನಾ ಕರ್ಕೇರ ವಂದಸಿದರು. ಬಿ. ಶ್ರೀಧರ್ ಅಮಿನ್ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಒಟ್ಟು ೩೦ ಮಂದಿ ರಕ್ತದಾನ ಮಾಡಿದರು ಹಾಗೂ ೭೫ ಮಂದಿ ಆರೋಗ್ಯ ಶಿಬಿರದ ಪ್ರಯೋಜನ ಪಡೆದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ