ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಲಯನ್ಸ್ ಮತ್ತು ಲಯನೆಸ್ ಕ್ಲಬ್, ದ.ಕ.ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿದ್ಯಾರ್ಥಿ ಗ್ರಾಹಕ ಶಿಕ್ಷಣ ಶಿಬಿರ ಡಿ.4ರಂದು ನಡೆಯಲಿದೆ.
ಬೆಳಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಆಚಾರ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಎಂ.ಸಿ.ಶ್ರೀನಿವಾಸಮೂರ್ತಿ, ಬಿಇಒ ಎನ್. ಶಿವಪ್ರಕಾಶ್, ಲಯನ್ಸ್ ಜಿಲ್ಲಾ ಸಂಚಿಕೆ ಪ್ರಧಾನ ಸಂಪಾದಕ ದಾಮೋದರ ಬಿ.ಎಂ. ಭಾಗವಹಿಸುವರು. ಸಂಜೆ 4 ಗಂಟೆಗೆ ಸಮಾರೋಪ ನಡೆಯಲಿದ್ದು, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಜೆ.ಸಾಲಿಯಾನ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಜಿಎಲ್ಟಿ ಸಂಯೋಜಕ ವಸಂತ ಕುಮಾರ್ ಶೆಟ್ಟಿ, ಜಿಲ್ಲಾಗ್ರಾಹಕ ಸಂಘಟನೆಗಳ ಒಕ್ಕೂಟ ಕಾರ್ಯದರ್ಶಿ ವಿಷ್ಣು ಪಿ.ನಾಯಕ್ ಭಾಗವಹಿಸುವರು ಎಂದು ಸಂಘಟಕ ಮಹಾಬಲೇಶ್ವರ ಟಿ.ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…