ಬಸ್ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಮೇಲ್ಕಾರ್ ಸಮೀಪ ಗುಡ್ಡೆಯಂಗಡಿ ಎಂಬಲ್ಲಿ ರಾತ್ರಿ 8.30ಕ್ಕೆ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಅತಾವುಲ್ಲಾ ಅವರ ಪತ್ನಿ ರುಕ್ಸಾನಾ (26) ಮೃತಪಟ್ಟ ಮಹಿಳೆ. ಸುಮಾರು 8.30 ರ ವೇಳೆಗೆ ತನ್ನಿಬ್ಬರು ಮಕ್ಕಳೊಂದಿಗೆ ಅಂಗಡಿಗೆ ಸಾಮಾನು ಖರೀದಿಸಿ ಮನೆಗೆ ಹೋಗಲು ರಸ್ತೆ ದಾಟಲು ನಿಂತಿದ್ದಾಗ ಮುಡಿಪು ಕಡೆಯಿಂದ ಬಿ.ಸಿ.ರೋಡಿಗೆ ಬರುತ್ತಿದ್ದ ಖಾಸಗಿ ಬಸ್ ಗೃಹಿಣಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟರೆ ,ಇಬ್ಬರು ಮಕ್ಕಳು ಹಾಗೂ ಗಂಡ ರಸ್ತೆ ದಾಟಿ ಇನ್ನೊಂದು ಬದಿಗೆ ಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದ ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಮುಂದಿನ ಕ್ರಮ ಕೈಗೊಂಡರು.
ಅಪಾಯಕಾರಿ ಜಾಗ: ರಸ್ತೆ ಅಗಲಗೊಂಡ ನಂತರ ಈ ಜಾಗ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ. ಈಗಾಗಲೇ ಈ ಕುರಿತು ಪಿಡಬ್ಲ್ಯುಡಿ ಎಂಜಿನಿಯರ್ ಮತ್ತು ಸರ್ಕಲ್ ಇನ್ಸ್ ಪೆಕ್ಟರ್ ಸಹಿತ ಸಂಬಂಧಪಟ್ಟವರಿಗೆ ಮನವಿ ನೀಡಲಾಗಿದೆ ಎಂದು ಪುರಸಭೆ ಸದಸ್ಯ ಸಿದ್ದೀಕ್ ಗುಡ್ಡೆಯಂಗಡಿ ತಿಳಿಸಿದ್ದಾರೆ. ಈ ಹಿಂದೆಯೂ ಈ ಪ್ರದೇಶದಲ್ಲಿ ಅಪಘಾತಗಳುಂಟಾಗಿದ್ದು, ವಾಹನಗಳು ಮಿತಿಮೀರಿದ ವೇಗದಲ್ಲಿ ಓಡದಂತೆ ಕಡಿವಾಣ ಹಾಕಬೇಕು, ರಸ್ತೆ ಉಬ್ಬುಗಳನ್ನು ಹಾಕಬೇಕು ಎಂದವರು ಒತ್ತಾಯಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)