ಬಂಟ್ವಾಳ

ಡಿ.7, 8ರಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಬಂಟ್ವಾಳ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.7 ಮತ್ತು 8ರಂದು ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಎ.ಕೆ.ಮಹಾಬಲ ಶೆಟ್ಟಿ ಸಭಾಂಗಣದಲ್ಲಿ ಡಾ. ಎಫ್.ಎಚ್.ಒಡೆಯರ್ ವೇದಿಕೆಯಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಬಂಟ್ವಾಳ ಅಧ್ಯಕ್ಷ ಪ್ರೊ.ತುಕಾರಾಮ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಸಾಪ ಬಂಟ್ವಾಳ ತಾಲುಕು ಅಧ್ಯಕ್ಷ ಮೋಹನ ರಾವ್ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಜಾಹೀರಾತು

ಡಿ.7ರಂದು ಸಂಜೆ 4.05ಕ್ಕೆ ಮಾಜಿ ಶಾಸಕ ವೈ.ಎಸ್.ವಿ.ದತ್ತ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬಿಡುಗಡೆ ಮಾಡುವರು. ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೊಸ ಕೃತಿ ಬಿಡುಗಡೆಗೊಳಿಸಲಿದ್ದಾರೆ. ಸೇವಾಂಜಲಿ ಫರಂಗಿಪೇಟೆ ಅಧ್ಯಕ್ಷ ಅರ್ಕುಳಬೀಡು ವಜ್ರನಾಥ ಶೆಟ್ಟಿ, ಉದ್ಯಮಿ ಬಿ.ಜಗನ್ನಾಥ ಚೌಟ, ಮಹಮ್ಮದ್ ಬಾವ ಎಫ್. ಭಾಗವಹಿಸಲಿದ್ದಾರೆ ಎಂದರು. ಡಿ.8ರಂದು ಸಂಜೆ ಸಮಾರೋಪ ಸಮಾರಂಭ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಜಿಪಂ ಸದಸ್ಯ ರವೀಂದ್ರ ಕಂಬಳಿ ಡಿ.7ರಂದು ಬೆಳಗ್ಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಧ್ವಜಾರೋಹಣ ಮಾಡುವರು. ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಕನ್ನಡ ಧ್ವಜಾರೋಹಣ ನೆರವೇರಿಸುವರು. ಮಧ್ಯಾಹ್ನ 2.30ಕ್ಕೆ ತುಂಬೆ ಪಪೂ ಕಾಲೇಜಿನಿಂದ ಸೇವಾಂಜಲಿ ಸಭಾಂಗಣದವರೆಗೆ ವಿವಿಧ ಸ್ತಬ್ದ ಚಿತ್ರಗಳು ಹಾಗೂ ಬ್ಯಾಂಡ್ ವಾದನದೊಂದಿಗೆ ಕನ್ನಡ ಭುವನೇಶ್ವರಿಯ ಮೆರವಣಿಗೆ ನಡೆಯುವುದು. ತುಂಬೆ ಬಿ.ಎ.ಸಮೂಹ ಸಂಸ್ಥೆಗಳ ಬಿ.ಅಬ್ದುಲ್ ಸಲಾಂ ಉದ್ಘಾಟಿಸುವರು. 3.45ಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ವಸ್ತುಪ್ರದರ್ಶನ ಉದ್ಘಾಟಿಸುವರು. ಪುಸ್ತಕ ಪ್ರದರ್ಶನ ಮಳಿಗೆಯನ್ನು ಕರ್ನಾಟಕ ಕತಾರ್ ಸಂಘದ ಉಪಾಧ್ಯಕ್ಷ ಮೂಡಂಬೈಲು ರವಿ ಶೆಟ್ಟಿ ಉದ್ಘಾಟಿಸಲಿದ್ದಾರೆ.

ಸಂಜೆ 6.05ರಿಂದ ಭಾಷೆ ಸಂಸ್ಕೃತಿ ಗೋಷ್ಠಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶಿವಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ವಿಷಯ ಮಂಡಿಸುವರು. ಸಂಜೆ 6.45ರಿಂದ ದೃಶ್ಯಮಾಧ್ಯಮಗಳಲ್ಲಿ ಧಾರಾವಾಹಿಗಳು ವಿಷಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ ಭಟ್ಟ್ ಅಧ್ಯಕ್ಷತೆಯಲ್ಲಿ ನಡೆಯುವುದು. ಡಾ. ವಿಜಯಲಕ್ಷ್ಮೀ ಪೊಳಲಿ, ಡಾ. ವೀಣಾ ಪಾಲಚಂದ್ರ ವಿಷಯ ಮಂಡಿಸುವರು. 8ರಂದು ಸಾಹಿತ್ಯ ಯುವ ಸ್ಪಂದನ, ಬಂಟ್ವಾಳ  ಇತಿಹಾಸ ಮತ್ತು ಮರೆಯಲಾರದ ಮಹಾನುಭಾವರು ಗೋಷ್ಠಿ ನಡೆಯಲಿದೆ. ಸಂಜೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ ನಡೆಯುವುದು. ರಾತ್ರಿ ಭೀಷ್ಮ ಸೇನಾಧಿಪತ್ಯ ತಾಳಮದ್ದಳೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಕೃಷ್ಣಕುಮಾರ್ ಪೂಂಜ,ನಿಕಟಪೂರ್ವ ಕಸಾಪ ಅಧ್ಯಕ್ಷ ಜಯಾನಂದ ಪೆರಾಜೆ,  ಪದಾಧಿಕಾರಿಗಳಾದ ಡಾ. ನಾಗವೇಣಿ ಮಂಚಿ, ಗಂಗಾಧರ ಆಳ್ವ, ರವೀಂದ್ರ ಕುಕ್ಕಾಜೆ, ಮೋಹನ್ ಕೆ.ಶ್ರೀಯಾನ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.