ಕಲ್ಲಡ್ಕ

ಮಾಣಿ ಯುವವಾಹಿನಿ ಘಟಕದಲ್ಲಿ ವಿಶುಕುಮಾರ್ ನೆನಪು

ವ್ಯಕ್ತಿ ತನ್ನ ನಡತೆ ಮತ್ತು ಕಾರ್ಯಗಳಿಂದ ಬದುಕಿರುವಾಗಲೆ ಸಾಯಬಾರದು ಬದಲಾಗಿ ನಮ್ಮ ವ್ಯಕ್ತಿತ್ವ ನಮ್ಮ ಸಾವಿನ ಬಳಿಕವೂ ನಮ್ಮನ್ನು ಜೀವಂತವಾಗಿರಿಸಬೇಕು, ನಮ್ಮ ನಡುವೆ ಇಲ್ಲದೇ ಇದ್ದರೂ ಅವರ ವ್ಯಕ್ತಿತ್ವದಿಂದ ನಮ್ಮ ನಡುವೆ ಇಂದಿಗೂ ಜೀವಂತವಾಗಿರುವವರು ವಿಶುಕುಮಾರ್ ಅವರ ಜೀವನ ಕ್ರಮ ಅನುಕರಣೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ನರೇಶ್‌ಕುಮಾರ್ ಸಸಿಹಿತ್ಲು ತಿಳಿಸಿದರು.

ಜಾಹೀರಾತು

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.), ಮಾಣಿ ಘಟಕದ ಅತಿಥ್ಯದಲ್ಲಿ ನಡೆದ ವಿಶುಕುಮಾರ್ ಪರಿಚಯ-ಸರಣಿ ಕಾರ್ಯಕ್ರಮದ ಮಾಲಿಕೆ ೩ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ನಾರಾಯಣಗುರು ಸಮುದಾಯ ಭವನ ಮಾಣಿಯಲ್ಲಿ ನಡೆದ ಈ ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ವಹಿಸಿದ್ದರು. ಸಮಿತಿ ಸಂಚಾಲಕ ಪ್ರದೀಪ್ ಎಸ್.ಆರ್ ವಾರ್ಷಿಕ ಕಾರ್ಯಕ್ರಮದ ಮಾಹಿತಿ ನೀಡಿದರು.

ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಭಾಷಣ, ರಸಪ್ರಶ್ನೆ ಹಾಗೂ ವಾರ್ಷಿಕ ಕಾರ್ಯಕ್ರಮದ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿ ಅಧ್ಯಕ್ಷರಾದ ಜಯಂತ್ ನಡುಬೈಲ್, ಪ್ರಧಾನ ಕಾರ್ಯದರ್ಶಿ ಸುನೀಲ್ ಕೆ ಅಂಚನ್, ಕೋಶಾಧಿಕಾರಿ ಹರೀಶ್ ಕೋಟ್ಯಾನ್, ಮಾಣಿ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ನಾರಾಯಣ ಸಾಲ್ಯಾನ್, ಯುವಸಿಂಚನ ಪತ್ರಿಕೆ ಸಂಪಾದಕ ರಾಜೇಶ್ ಸುವರ್ಣ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮ್‌ನಾಥ್ ಕೆ, ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಲೋಕೇಶ್ ಸುವರ್ಣ ಅಲೆತ್ತೂರು, ಉಪಾಧ್ಯಕ್ಷ ರಮೇಶ್ ಪೂಜಾರಿ, ಕಾರ್ಯದರ್ಶಿ ಸುಜಿತ್ ಮಾಣಿ ಉಪಸ್ಥಿತರಿದ್ದರು.

ಮಾಣಿ ಘಟಕದ ನಿಕಟಪೂರ್ವಅಧ್ಯಕ್ಷ ರಾಜೇಶ್ ಪೂಜಾರಿ ಬಾಬನಕಟ್ಟೆ ಸ್ವಾಗತಿಸಿದರು.ಯುವವಾಹಿನಿ ಮಾಣಿ ಘಟಕದ ಉಪಾಧ್ಯಕ್ಷ ಪ್ರಶಾಂತ್ ಧನ್ಯವಾದ ನೀಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

20 minutes ago