ಕಲ್ಲಡ್ಕ

ಕಲ್ಲಡ್ಕ ಕ್ರೀಡಾಕೂಟದಲ್ಲಿ ಈ ಬಾರಿ ಅಣುಪರೀಕ್ಷೆ, ಪಟೇಲ್, ವಾಜಪೇಯಿ ಸ್ಮರಣೆ

  • ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಭಾಗಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿ.9ರಂದು ಸಂಜೆಯಿಂದ ರಾತ್ರಿವರೆಗೆ 3316 ವಿದ್ಯಾರ್ಥಿಗಳಿಂದ ಹೊನಲು ಬೆಳಕಿನ ಕ್ರೀಡಾಕೂಟ ನಡೆಯಲಿದ್ದು, ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಸಹಿತ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸುಮಾರು 19 ನಾನಾ ರೀತಿಯ ಕವಾಯತುಗಳು, ಪ್ರದರ್ಶನಗಳು ಇರಲಿದ್ದು, ಈ ಬಾರಿ ಸರದಾರ್ ವಲ್ಲಭಭಾಯಿ ಪಟೇಲ್, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೆನಪು, ಪೋಖರಣ್ ಅಣುಪರೀಕ್ಷೆಯ ಪ್ರದರ್ಶನ ಮತ್ತು ಶಬರಿಮಲೆ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ಘಟನಾವಳಿಗಳ ಸನ್ನಿವೇಶಗಳು ಪ್ರದರ್ಶನಗೊಳ್ಳಲಿವೆ.

ಜಾಹೀರಾತು

ಈ ವಿಷಯವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಗುರುವಾರ ಸಂಜೆ ಕಲ್ಲಡ್ಕದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲ ತಿಳಿಸಿದರು.

ಸುಮಾರು 30 ಕ್ಕೂ ಅಧಿಕ ವರ್ಷಗಳಿಂದ ವಿದ್ಯಾಕೇಂದ್ರ ಕಾರ್ಯಾಚರಿಸುತ್ತಿದ್ದು, ಗುರುಕುಲ ಮಾದರಿಯ ವಿದ್ಯಾಭ್ಯಾಸ, ಭಾರತೀಯ ಸಂಸ್ಕೃತಿಯೊಂದಿಗೆ ಸಂಸ್ಕಾರವನ್ನು ಕೌಶಲಯುಕ್ತ ವಿದ್ಯಾಭ್ಯಾಸ ಮತ್ತು ಜಗತ್ತನ್ನು ಎದುರಿಸುವ ಧೈರ್ಯವನ್ನು ಒದಗಿಸುವ ಪ್ರೇರಣೆಯನ್ನು ವಿದ್ಯಾಸಂಸ್ಥೆ ನೀಡುತ್ತದೆ ಎಂದ ಅವರು, ಕ್ರೀಡಾಕೂಟವೆಂದರೆ ಸ್ಪರ್ಧೆಯಲ್ಲ. ಒಬ್ಬರಿಗೊಬ್ಬರು ಪೂರಕವಾಗಿ ಪ್ರತಿಭಾ ಪ್ರದರ್ಶನ ನೀಡುತ್ತಾರೆ. ಇವರಲ್ಲಿ 20 ಅಂಗವಿಕಲ, ವಿಕಲಚೇತನ ವಿದ್ಯಾರ್ಥಿಗಳೂ ಇದ್ದಾರೆ ಎಂದರು.

ಸಂಚಲನ, ಶಿಶುನೃತ್ಯ, ಘೋಷ್ ಪ್ರದರ್ಶನ, ಜಡೆಕೋಲಾಟ, ನಿಯುದ್ಧ, ಯೋಗಾಸನ, ಚಿತ್ತಾರ, ಕೋಲ್ಮಿಂಚು ಪ್ರದರ್ಶನ, ನೃತ್ಯ ಭಜನೆ, ದೀಪಾರತಿ, ಮಲ್ಲಕಂಭ, ಘೋಷ್ ಟಿಕ್ ಟಿಕ್ ಪ್ರದರ್ಶನ, ನೃತ್ಯವೈವಿಧ್ಯ, ಚಕ್ರ ಸಮತೋಲನ, ಬೆಂಕಿ ಸಾಹಸ, ಚೆಂಡೆವಾದ್ಯ, ಕಾಲ್ಚಕ್ರ, ಕೂಪಿಕಾ, ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ರಂಗೋಲಿಯ ಚಿತ್ತಾರ, ಅಣಕು ಪ್ರದರ್ಶನಗಳು ಈ ಬಾರಿಯ ಹೈಲೈಟ್ಸ್.

ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್, ಪದವಿ ಕಾಲೇಜು ಉಪನ್ಯಾಸಕ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

17 hours ago