ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ.ಪಿ.ತುಕಾರಾಮ ಪೂಜಾರಿ ಸಮ್ಮೇಳನಾಧ್ಯಕ್ಷತೆಯಲ್ಲಿ ಫರಂಗಿಪೇಟೆಯಲ್ಲಿ 19ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚಿಂತಕ ವೈ.ಎಸ್.ವಿ.ದತ್ತಾ ನೆರವೇರಿಸಿದರು.
ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣಕುಮಾರ್ ಪೂಂಜ ಸ್ವಾಗತಿಸಿದರು. ಕಸಾಪ ಬಂಟ್ವಾಳ ಅಧ್ಯಕ್ಷ ಕೆ. ಮೋಹನ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಆಶಯ ನುಡಿಗಳನ್ನಾಡಿದರು. ಸ್ಮರಣ ಸಂಚಿಕೆಯನ್ನು ಶಾಸಕ ರಾಜೇಶ್ ನಾಯ್ಕ್ ಅನಾವರಣಗೊಳಿಸಿದರು.
ಹೊಸ ಕೃತಿಗಳನ್ನು ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಬಿಡುಗಡೆಗೊಳಿಸಿದರು. ಸಮ್ಮೆಳನಾಧ್ಯಕ್ಷರನ್ನು ಡಾ. ಯೋಗೀಶ್ ಕೈರೋಡಿ ಪರಿಚಯಿಸಿದರು. ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉದ್ಯಮಿ ಜಗನ್ನಾಥ ಚೌಟ , ಮಹಮ್ಮದ್ ಬಾವ, ವಜ್ರನಾಥ ಶೆಟ್ಟಿ , ಬಿಇಒ ಶಿವಪ್ರಕಾಶ್, ಸ್ವಾಗತ ಸಮಿತಿ ಅಧ್ಯಕ್ಷ ಗಂಗಾಧರ ಆಳ್ವ, ಕಸಾಪ ತಾಲೂಕು ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು. ವಿ.ಸು,ಭಟ್ ಮತ್ತು ಡಿ.ಬಿ.ಅಬ್ದುಲ್ ರಹಿಮಾನ್ ಕಾರ್ಯಕ್ರಮ ನಿರ್ವಹಣೆ ಮಾಡಿದರೆ, ಮಹಾಬಲೇಶ್ವರ ಹೆಬ್ಬಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಕೆ.ಆರ್. ದೇವದಾಸ್ ಸಮಗ್ರ ನಿರ್ವಹಣೆ ವಹಿಸಿದ್ದರು.
ಇದಕ್ಕೂ ಮುನ್ನ ಆಕರ್ಷಕ ಮೆರವಣಿಗೆ ತುಂಬೆ ಬಿ.ಎ.ಮೈದಾನದಿಂದ ಫರಂಗಿಪೇಟೆವರೆಗೆ ನಡೆಯಿತು. ಬಿ.ಎ.ಸಮೂಹ ಸಂಸ್ಥೆ ಆಡಳಿತ ನಿರ್ದೇಶಕ ಬಿ.ಅಬ್ದುಲ್ ಸಲಾಂ ಉದ್ಘಾಟಿಸಿದರು. ಬೆಳಗ್ಗೆ ರಾಷ್ಟ್ರಧ್ವಜಾರೋಹಣ, ಪರಿಷತ್ ಧ್ವಜಾರೋಹಣ ಮತ್ತು ಕನ್ನಡ ಧ್ವಜಾರೋಹಣ ನೆರವೇರಿತು. ಈ ಸಂದರ್ಭ ಜಿಪಂ ಸದಸ್ಯ ರವೀಂದ್ರ ಕಂಬಳಿ, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದು, ಕಾರ್ಯಕ್ರಮ ನೆರವೇರಿಸಿದರು.