ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಬಿ.ಸಿ.ರೋಡು ಜಂಕ್ಷನ್‌ನಲ್ಲಿ ಸಂಭ್ರಮ ಆಚರಿಸಲಾಯಿತು. ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ನಾಯಕರಿಗೆ ಜೈಕಾರ ಹಾಕಿದರು.
ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಭೂರ್ವ ಗೆಲುವು ಸಾಧಿಸಿರುವುದು ಬಿಜೆಪಿ ಮುಕ್ತ ಭಾರತ ನಿರ್ಮಾಣವಾಗುವತ್ತ ಸಾಗುತ್ತಿದೆ ಎಂದರು.
ಮುಂದಿನ ಲೋಕಸಭಾ ಚುನಾವಣೆಗೆ ಈ ಗೆಲುವು ದಿಕ್ಸೂಚಿಯಾಗಲಿದ್ದು ಕೇಂದ್ರ ಸರಕಾರದ ಜನ ವಿರೋಧಿ ನೀತಿಯಿಂದ ಬೇಸತ್ತು ಜನ ಕಾಂಗ್ರೆಸನ್ನು ಗೆಲ್ಲಿಸಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರಕಾರದಿಂದ ಬಂಡವಾಳ ಶಾಹಿಗಳಿಗೆ ಪ್ರಯೋಜನವಾಗಿದಯೇ ವಿನಃ ಜನ ಸಾಮಾನ್ಯರಿಗೆ ಏನು ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ ಪಂಚರಾಜ್ಯಗಳ ವಿಧಾನಪರಿಚತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದೇಶದ ಜನರಿಗೆ ಕಾಂಗ್ರೆಸ್ ಅನಿವಾರ್ಯ ಎಂಬುದನ್ನು ತೋರಿಸಿಕೊಟ್ಟಿದೆ. ಬಡವರು, ಮಧ್ಯಮವರ್ಹದವರು, ಕೂಲಿಕಾರ್ಮಿಕರಿಗೆ ತೊಂದರೆ ನೀಡಿ ದೇಶದಲ್ಲಿ ದುರಾಡಳಿತ ಮಾಡಿದ ಕೇಂದ್ರ ಸರಕಾರಕ್ಕೆ ಈ ಚುನಾವಣೆಯ ಫಲಿತಾಂಶದ ಮೂಲಕ ಜನರು ಉತ್ತರ ನೀಡಿದ್ದಾರೆ ಎಂದರು.
ಜಿಲ್ಲಾ ಪಂಚಾಯತ್ ಸದಸ್ಯ ಮಂಜುಳಾ ಮಾವೆ ಪಕ್ಷ ಪ್ರಮುಖರಾದ ಬೇಬಿ ಕುಂದರ್ ಸುದೀಪ್ ಶೆಟ್ಟಿ, ಅಬ್ಬಾಸ್ ಅಲಿ, ಸದಾಶಿವ ಬಂಗೇರಾ, ಯೂಸುಫ್ ಕರಂದಾಡಿ, ಗಂಗಾಧರ, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ವೆಂಕಪ್ಪ ಪೂಜಾರಿ, ಪ್ರಶಾಂತ್ ಕುಲಾಲ್, ಬಿ.ಪ್ರಕಾಶ್ ಶೆಟ್ಟಿ, ಪದ್ಮನಾಭ ರೈ, ಮಧುಸೂದನ್ ಶೆಣೈ, ಮಹಮ್ಮದ್ ನಂದರಬೆಟ್ಟು, ಆನಂದ ಸಾಲ್ಯಾನ್, ಮತ್ತಿತರ ಪ್ರಮುಖರು ಹಾಜರಿದ್ದರು.