ಕರ್ನಾಟಕ ವಾರ್ತಾ ಮತ್ತು ಸಂಪರ್ಕ ಇಲಾಖೆಯ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಮಹಾತ್ಮಾ ಗಾಂಧೀಜಿಯವರ 150 ನೇ ಜನ್ಮಾಚರಣೆಯ ಅಂಗವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಗಾಂಧಿ 150 ರಂಗಪಯಣ ತಂಡ ಡಿ.12ರಿಂದ 15ರವರೆಗೆ ಬಂಟ್ವಾಳ ತಾಲೂಕಿನಲ್ಲಿ ಪ್ರದರ್ಶನ ನೀಡಲಿದೆ.
ಬೊಳುವಾರು ಮಹಮ್ಮದ್ ಕುಞಿಯವರ ಪಾಪು ಗಾಂಧಿ ಬಾಪು ಆದ ಕಥೆ ಎಂಬ ಕೃತಿಯನ್ನು ಡಾ.ಶ್ರೀಪಾದ್ ಭಟ್ ನಿರ್ದೇಶನದಲ್ಲಿ ಪಾಪು-ಬಾಪುನಾಟಕವಾಗಿ ತಂಡ ಪ್ರದರ್ಶಿಸಲಿದೆ. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ರೋಟರಿ ಕ್ಲಬ್ ಆಯೋಜನೆಯಲ್ಲಿ ಈ ತಂಡ 12ರ ಬುಧವಾರ ಬೆಳಿಗ್ಗೆ 9.30 ಕ್ಕೆ ಪೂಂಜಾಲಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಅಪರಾಹ್ನ 2 ರಿಂದ ಸಿದ್ದಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರದರ್ಶನ ನೀಡಲಿದೆ.
13ರಂದು ಗುರುವಾರ ಬೆಳಿಗ್ಗೆ 9.30 ಕ್ಕೆ ವಗ್ಗ ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ , ಅಪರಾಹ್ನ 2.30ಕ್ಕೆ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ, ದ.14 ರ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಹಾಗೂ ಅಪರಾಹ್ನ 2 ರಿಂದ ಬಂಟ್ವಾಳ ಎಸ್‌ವಿಎಸ್ ಕಾಲೇಜಿನಲ್ಲಿ 15ರಂದು ಬೆಳಿಗ್ಗೆ 10 ಗಂಟೆಗೆ ಮೆಲ್ಕಾರ್ ಮಹಿಳಾ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ಸಂಜೆ 7 ಗಂಟೆಗೆ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಸಾರ್ವಜನಿಕ ಪ್ರದರ್ಶನ ಏರ್ಪಡಿಸಿದೆ ಎಂದು ರಂಗಪಯಣ ತಂಡದ ಜಿಲ್ಲಾ ಸಂಚಾಲಕ ಮೌನೇಶ ವಿಶ್ವಕರ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.