ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಮಾಜಘಾತುಕ ಶಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಸಹಾಯಕ ಪೊಲೀಸ್ ಅಧೀಕ್ಷಕರಿಗೆ ಮಂಗಳವಾರ ಮನವಿ ಸಲ್ಲಿಸಿತು.
ಬಿಲ್ಲವ ಸಮಾಜ ಸೇವಾ ಸಂಘದ ವಿಶೇಷ ಕಾರ್ಯಕಾರಿ ಸಮಿತಿ ಸಭೆಯ ತೀರ್ಮಾನದಂತೆ ಈ ಮನವಿ ಸಲ್ಲಿಸಲಾಗಿದ್ದು ಕೇಂದ್ರದ ಮಾಜಿ ಸಚಿವ, ಬಿಲ್ಲವ ಸಮಾಜದ ಪ್ರಮುಖ ಮಾರ್ಗದರ್ಶಕರಾಗಿರುವ ಜನಾರ್ದನ ಪೂಜಾರಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಣದಲ್ಲಿ ಪ್ರಚಾರಮಾಡುತ್ತಿರುವಾತನನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಮಿತಿ ಆಗ್ರಹಿಸಿದೆ.
ಈ ಸಂದರ್ಭ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಉಪಾಧ್ಯಕ್ಷ ರಾಘವ ಅಮೀನ್, ಪ್ರ.ಕಾರ್ಯದರ್ಶಿ ರಮೇಶ್ ಎಂ.ತುಂಬೆ, ಕೋಶಾಧಿಕಾರಿ ಉಮೇಶ್ ಸುವರ್ಣ, ಜತೆಕಾರ್ಯದರ್ಶಿ ಶಂಕರ್ ಕಾಯರ್‌ಮಾರ್, ಲೆಕ್ಕ ಪರಿಶೋಧಕ ಸತೀಶ್ ಬಿ., ಮಹಿಳಾ ಸಂಘದ ಅಧ್ಯಕ್ಷೆ ಜಯಲಕ್ಷ್ಮೀ ಮಾಜಿ ಅಧ್ಯಕ್ಷ ರಾಮಪ್ಪ ಪೂಜಾರಿ ಮೊದಲಾದವರು ಹಾಜರಿದ್ದರು.