ಬಂಟ್ವಾಳ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ನೂತನ ಶಾಖೆ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ, ಸಜೀಪಮೂಡ-ಬೊಳ್ಳಾಯಿ ಇದರ ನೂತನ ಬೋಳಂತೂರು ಮೊದಲ ಶಾಖೆಯು ಡಿ. 14ರಂದು ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಹೇಳಿದ್ದಾರೆ.

ಜಾಹೀರಾತು

ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ಬೆಳಿಗ್ಗೆ 10.56 ಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭದ್ರತಾ ಕೋಶ ಉದ್ಘಾಟಿಸುವರು. ಜಿಪಂ ಸದಸ್ಯೆ ಮಂಜುಳಾ ಮಾವೆ ಅವರು ಠೇವಣಿ ಪತ್ರ ಬಿಡುಗಡೆ ಮಾಡುವರು.

ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯೆ ಶೋಭಾ ರೈ, ಬೋಳಂತೂರು ಗ್ರಾಪಂ ಅಧ್ಯಕ್ಷೆ ಆಸಿಯಮ್ಮ, ಉಪಾಧ್ಯಕ್ಷ ಚಂದ್ರಶೇಖರ್ ರೈ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಖಂಡನೆ: ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಬಿಲ್ಲವ ಸಮಾಜ ಖಂಡಿಸುತ್ತದೆ. ಅವಹೇಳನಕಾರಿ ಹೇಳಿಕೆ ನೀಡಿರುವ ವ್ಯಕ್ತಿಯವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಲ್ಲವ ಸಮಾಜ ಒತ್ತಾಯಿಸತ್ತದೆ ಎಂದು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರೂ ಆಗಿರುವ ಸಂಜೀವ ಪೂಜಾರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳಾದ ವಾಸು ಪೂಜಾರಿ, ರಮೇಶ್, ಕಿಶೋರ್, ಲೋಕೇಶ್, ಅಶ್ವಿನಿ ಕುಮಾರ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

3 hours ago