ಪುಂಜಾಲಕಟ್ಟೆ

ಸಿದ್ಧಕಟ್ಟೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್ನೆಸ್ಸೆಸ್ ಶಿಬಿರ, ವಿವಿಧ ಉಪನ್ಯಾಸ

ಬಂಟ್ವಾಳ ಕಾಮಾಜೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರವನ್ನು ತಾಪಂ ಸದಸ್ಯ ಪ್ರಭಾಕರ ಪ್ರಭು ಡಿ.10ರಂದು ಉದ್ಘಾಟಿಸಿ ಶುಭ ಹಾರೈಸಿದರು. ಬಿಇಒ ಶಿವಪ್ರಕಾಶ್ ಮಾತನಾಡಿ, ಮೂಲ ವಿಜ್ಞಾನ ಮತ್ತು ಸಮಾಜ ವಿಜ್ಞಾನದ ಕಡೆಗೆ ಒಲವು ತೋರಿ ಪೋಷಿಸಬೇಕೆಂದು ಸಲಹೆ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಏ. ಗಿರೀಶ್ ಭಟ್ ವಹಿಸಿದರು. ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾಪಂ ಅಧ್ಯಕ್ಷೆ ಗುಲಾಬಿ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಪೂಜಾರಿ ಪ್ರೌಢಶಾಲೆ ಉಪಪ್ರಾಂಶುಪಾಲ ರಮಾನಂದ್, ಉಮೇಶ್ ಗೌಡ, ಶ್ರೀಧರ್ ಎಸ್ ಪಿ, ಸಂದೇಶ ಶೆಟ್ಟಿ, ಭಾಗವಹಿಸಿದರು. ಶಿಬಿರಾಧಿಕಾರಿಯಾದ ಪ್ರೊ. ಹೈದರಾಲಿ ಸ್ವಾಗತಿಸಿದರು. ಶಿಬಿರಾರ್ಥಿಯಾದ ಪೂಜಾ ನಿರೂಪಿಸಿದರು ವರ್ಷಿಣಿ ವಂದಿಸಿದರು.


ರಂಗಭೂಮಿ ಮತ್ತು ನಾಟಕಗಳು ಪರಿಣಾಮಕಾರಿ ಮಾಧ್ಯಮಗಳಾಗಿದ್ದು, ಸಮಾಜ ಪರಿವರ್ತನೆಗೆ ಸಹಕಾರಿಯಾಗಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಅವರು ಹೇಳಿದರು. ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ನಡೆಯುತ್ತಿರುವ ೨೦೧೮-೧೯ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಡಿ. 12ರಂದು ರಂಗಭೂಮಿ ವಿಶೇಷ ಉಪನ್ಯಾಸ ಮತ್ತು ಗಾಂಧಿ ೧೫೦ ರಂಗಪಯಣ ನಾಟಕ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪಾಪು ಗಾಂಧಿ- ಗಾಂಧಿ ಬಾಪು ನಾಟಕದಿಂದ ಗಾಂಧೀಜಿ ಬಗ್ಗೆ ವಿಶೇಷ ಅರಿವು ಮೂಡಿಸಿದ್ದು, ಉತ್ತಮ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿಯಾಗಬೇಕು ಎಂದರು.

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅವರು ಮಾತನಾಡಿ, ಶಿಕ್ಷಣದಲ್ಲಿ ರಂಗಭೂಮಿ ಅಳವಡಿಕೆಯಿಂದ ಉತ್ತಮ ಸಂವಹನ ಸಾಧ್ಯ ಎಂದು ಹೇಳಿದರು.

ಪತ್ರಕರ್ತ, ರಂಗನಟ ರತ್ನದೇವ್ ಪುಂಜಾಲಕಟ್ಟೆ ಅವರು ಮಾತನಾಡಿ, ರಂಗಭೂಮಿ ಚಲನಶೀಲ ಮಾಧ್ಯಮವಾಗಿದ್ದು, ಮನೋರಂಜನೆ, ಮಾಹಿತಿ, ನೀತಿ, ಮೌಲ್ಯ, ಜಾಗೃತಿ, ವ್ಯಕ್ತಿತ್ವ ವಿಕಸನ, ಇತರರನ್ನು ಅರಿತುಕೊಳ್ಳುವ ಸಾಮರ್ಥ್ಯ ರಂಗಭೂಮಿಗಿದೆ ಎಂದು ಹೇಳಿದರು.

ಪ್ರೌಢಶಾಲಾ ವಿಭಾಗ ಉಪಪ್ರಾಂಶುಪಾಲ ರಮಾನಂದ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ರೋಟರ್‍ಯಾಕ್ಟ್ ಕ್ಲಬ್ ಸ್ಥಾಪಿಸುವ ಮೂಲಕ ರೋಟರಿ ಕ್ಲಬ್ ಹಲವಾರು ಅಭಿವೃದ್ಧಿ ಕೊಡುಗೆಗಳನ್ನು ನೀಡಿದೆ. ರಂಗಪಯಣ ನಾಟಕ ಪ್ರದರ್ಶನ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ವೈಚಾರಿಕತೆಗೆ ಅವಕಾಶ ಒದಗಿಸಿದೆ ಎಂದು ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಂಗಪಯಣ ಜಿಲ್ಲಾ ಸಮನ್ವಯಾಽಕಾರಿ ಮೌನೇಶ್ ವಿಶ್ವಕರ್ಮ , ಉಪಸ್ಥಿತರಿದ್ದರು.

ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರೊ. ಹೈದರಾಲಿ ಅವರು ಸ್ವಾಗತಿಸಿದರು. ಶಿಬಿರಾರ್ಥಿಗಳಾದ ಜನಾರ್ದನ ವಂದಿಸಿದರು. ದಿವ್ಯಾ ಕೆ. ಕಾರ್ಯಕ್ರಮ ನಿರೂಪಿಸಿದರು.

ಉಪನ್ಯಾಸ:

 

ಎನ್ ಎಸ್ ಎಸ್ ಶಿಬಿರದಲ್ಲಿ ಸಾಮಾಜಿಕ ಸ್ವಾಸ್ಥ್ಯದಲ್ಲಿ ಪ್ರಮುಖ ಪಾತ್ರ ವಿಚಾರದಲ್ಲಿ ಡಾ.ಸುದೀಪ್ ಉಪನ್ಯಾಸ ನೀಡಿದರು.ಎನ್ ಎಸ್ ಎಸ್ ವಾರ್ಷಿಕ ಶಿಬಿರವು ವಿದ್ಯಾರ್ಥಿಗಳಲ್ಲಿ ಸಹಬಾಳ್ವೆ, ಸಮಯಪರಿಪಾಲನೆ, ಸ್ವಾತಿಕ ಆಹಾರ ಪದ್ದತಿ, ನಿಯಮಿತ ವ್ಯಾಯಾಮ ಶೈಕ್ಷಣಿಕ ಕಾರ್ಯಕ್ರಮ ನೀಡುತ್ತದೆ ಇದು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಸ್ವಾಸ್ತ್ಯವನ್ನು ಕಾಪಾಡಿಕೊಳ್ಳುತದೆ ಹಾಗೂ ಸಾಮಾಜಿಕ ಸ್ವಾಸ್ತ್ಯವನ್ನು ಸುಸ್ಥಿರ ಗೊಳಿಸುತ್ತದೆ ಎಂದರು. ಅಧ್ಯಕ್ಷತೆಯನ್ನು ವಹಿಸಿದ ಮಂದಾರ್ತಿ ಶೆಟ್ಟಿ ಅವರು ಎನ್ ಎಸ್ ಎಸ್ ಶಿಬಿರದ ಚಟುವಟಿಕೆಗಳನ್ನು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿದ್ದ ಕಾಲೇಜು ನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾದ್ಯಾಪಕ ಪ್ರೊ.ಬಾಲಸುಬ್ರಮಣ್ಯ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಪ್ರೊ. ಹೈದರಾಲಿ ಸ್ವಾಗತಿಸಿದರು. ಪವಿತ್ರ ಕಾರ್ಯಕ್ರಮ ನಿರ್ವಹಿಸಿದರು ತ್ಯಾಗರಾಜ್ ವಂದಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts