ಪುಂಜಾಲಕಟ್ಟೆ

ಸರಪಾಡಿ ಶರಭೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಸಭೆ

ಬಂಟ್ವಾಳ ತಾಲೂಕಿನ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸಭೆಯು ಸಮಿತಿಯ ಸಂಚಾಲಕ ಡಾ| ಎಂ.ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ಕ್ಷೇತ್ರ ಸಭಾಂಗಣದಲ್ಲಿ ಜರಗಿತು.

ಜಾಹೀರಾತು

ಜೀರ್ಣೋದ್ಧಾರ ಕಾರ್ಯದ ಆರಂಭಿಸುವ ದೃಷ್ಟಿಯಿಂದ ನಿಧಿ ಸಂಗ್ರಹದ ಕುರಿತು ಜ.೭ರಂದು ಭಕ್ತರ ಸಭೆ ಕರೆಯಲು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಕ್ಷೇತ್ರಕ್ಕೆ ಸಂಬಂಧಪಟ್ಟ ಗ್ರಾಮಗಳ ಎಲ್ಲ ಮನೆಗಳ ಭಕ್ತರು ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲು ಡಾ| ಮೋಹನ್ ಆಳ್ವ ಅವರು ಸಲಹೆ ನೀಡಿದರು.

ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಮಾತನಾಡಿ, ನೂತನ ದೇಗುಲ ನಿರ್ಮಾಣದ ಕುರಿತು ವಾಸ್ತುಶಿಲ್ಪಿಗಳ ಜತೆ ಚರ್ಚಿಸಿ, ಶೀಘ್ರ ರೂಪುರೇಖೆಗಳನ್ನು ಸಿದ್ಧಪಡಿಸಲಾಗುವುದು ಎಂದರು. ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ ಮಾತನಾಡಿ, ಹೆಚ್ಚಿನ ಧನ ಸಂಗ್ರಹದ ಕುರಿತು ಕ್ಷೇತ್ರಕ್ಕೆ ಸಂಬಂಧಪಟ್ಟ ಪರವೂರಿನವರನ್ನು ಸಂಪರ್ಕಿಸುವ ಕುರಿತು ತಿಳಿಸಿದರು.

ಏ. ೧೯ರ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ ಮೊದಲಾದ ವಿಚಾರಗಳ ಕುರಿತು ಚರ್ಚಿಸಲಾಯಿತು. ಕ್ಷೇತ್ರದ ಆಡಳಿತ ಮಂಡಳಿಯ ಮೊಕ್ತೇಸರರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ವೇದಿಕೆಯಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಎಸ್, ಪುರೋಹಿತ ವಿಜಯಕೃಷ್ಣ ಐತಾಳ್ ಪೂಂಜೂರು ಉಪಸ್ಥಿತರಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ನಾರಾಯಣ ಶೆಟ್ಟಿ ಎಚ್. ಸ್ವಾಗತಿಸಿ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

20 minutes ago