ತುಂಬೆ ಗ್ರಾಮದ ಮಾಣೂರು ನಿವಾಸಿ ಅಬೂಬಕರ್ ಮುಸ್ಲಿಯಾರ್ ಹಾಗೂ ದುಲೈಕಾ ದಂಪತಿಗಳ ಪುತ್ರ ಆಶಿಕ್ ಕುಕ್ಕಾಜೆ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೀಸ್ ಎವರ್ನೆಸ್ ಟ್ರಸ್ಟ್ ನಾಲ್ಕನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ’ಸೇವಾ ರತ್ನ’ ಪ್ರಶಸ್ತಿ ೨೦೧೮ ನೀಡಲಾಯಿತು.
ಪೀಸ್ ಎವರ್ನೆಸ್ ಟ್ರಸ್ಟ್ ಅಧ್ಯಕ್ಷ ಅಲ್ತಾಫ್ ಬಿಳಗುಳ ಜೇಸಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು.
ಸಾಮಾಜಿಕ ತಾಣಗಳಲ್ಲಿ ಬಡ ರೋಗಿಗಳ, ಅಶಕ್ತರ ಬಗ್ಗೆ ಬರಹಗಳನ್ನು ಬರೆಯುವ ಮೂಲಕ ಬಡ ರೋಗಿಗಳ ಚಿಕಿತ್ಸೆಗೆ ಸಾಮಾಜಿಕ ಜಾಲತಾಣವನ್ನು ಉಪಯೋಗಿಸಿ ಹಣ ಸಂಗ್ರಹಿಸಿ ಅರ್ಹ ರೋಗಿಗಳ ಚಿಕಿತ್ಸೆಗೆ ನೆರವು ನೀಡುವುದರ ಮೂಲಕ ನಿಸ್ವಾರ್ಥವಾಗಿ ಬಡ ರೋಗಿಗಳ ಸೇವೆಯಲ್ಲಿ ತೊಡಗಿರುವ ಆಶಿಕ್ ಕುಕ್ಕಾಜೆ ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಗಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…