ಬಂಟ್ವಾಳ

ಬಂಟ್ವಾಳದಲ್ಲಿಲ್ಲ ಲೋ ಓಲ್ಟೇಜ್ – ರಾಜೇಶ್ ನಾಯ್ಕ್ ಪ್ರಶ್ನೆಗೆ ಸಿಎಂ ಉತ್ತರ

www.bantwalnews.com

ಬಂಟ್ವಾಳ ತಾಲೂಕಿನಲ್ಲಿ ಲೋ ಓಲ್ಟೇಜ್ ಸಮಸ್ಯೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು

ಬೆಳಗಾವಿ ವಿಧಾನಮಂಡಲದಲ್ಲಿ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉಳಿಪಾಡಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ವಿದ್ಯುತ್ ವಿತರಣಾ ಜಾಲದ ಬಲವರ್ಧನೆಗಾಗಿ ಮತ್ತು ಗುಣಮಟ್ಟದ ನಿರಂತರ ವಿದ್ಯುತ್ ಪಿಉರೈಕೆಗಾಗಿ ಸುಧಾರಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ. ರೈತರ ನೀರಾವರಿ ಪಂಪ್ ಸೆಟ್ ಕಾಮಗಾರಿಗಳಿಗೆ ಅವಶ್ಯಕತೆ ಇರುವ ಸಾಮಾಗ್ರಿಗಳನ್ನು ಸಕಾಲದಲ್ಲಿ ಖರೀದಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉಪಪ್ರಶ್ನೆಗೆ ಉತ್ತರಿಸಿದರು.

 461.31 ಲಕ್ಷ ರೂ.ವಿನ ಕಾಮಗಾರಿ ಮಂಜೂರು: 

ಬಂಟ್ವಾಳ ತಾಲೂಕಿನಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿಯೋಜನೆಯಡಿ ಗ್ರಾಮೀಣ ಮನೆಗಳ ವಿದ್ಯುದ್ದೀಕರಣಕ್ಕೆ 461.31 ಲಕ್ಷ ರೂ.ವಿನ ಕಾಮಗಾರಿಯ ವಿಸ್ತೃತ ಯೋಜನಾ ವರದಿಗೆ ಮಂಜೂರಾತಿ ದೊರೆತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮುಖ್ಯಂಮತ್ರಿ ಎಚ್.ಡಿ.ಕುಮಾರ್ ಸ್ವಾಮಿ ಅವರು ಶಾಸಕರ ಮತ್ತೊಂದು ಪ್ರಶ್ನೆಗೆ ಲಿಖಿತ ಉತ್ತರ ನೀಡಿದರು.

ಯೋಜನೆಯಡಿ ಗ್ರಾಮಿಉಣ ಮನೆಗಳ ವಿದ್ಯದ್ದೀಕರಣಕ್ಕೆ 233 ಫಲಾನುಭವಿಗಳನ್ನು ಗುರುತಿಸಲಾಗಿದ್ದು,231 ಫಲಾನುಭವಿಗಳಮನೆಗೆ ಈಗಾಗಲೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.ಯೋಜನೆ ಮುಕ್ತಾಯ ಹಂತದಲ್ಲಿದ್ದು,ಡಿ.31 ರ ಒಳಗೆ ಪೂರ್ಣ ಗೊಳಿಸಲಾಗುವುದು ಎಂದು ಸಿಎಂ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಪಿಲಾತಬೆಟ್ಡು ಪ.ಪೂ.ಕಾಲೇಜಿನ ಉಪನ್ಯಾಸಕರ ಹುದ್ದೆ :

ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಪ.ಪೂ.ಕಾಲೇಜಿನ ಉಪನ್ಯಾಸಕರ ಹುದ್ದೆ ಸಹಿತ ಸ್ಥಳಾಂತರಿಸಿರುವುದು  ಸರಕಾರದ ಗಮನದಲ್ಲಿದ್ದು, ಪ್ರಸ್ತುತ ಇಂಗ್ಲೀಷ್ ಮತ್ತು ಅರ್ಥ ಶಾಸ್ತ್ರದ ಉಪನ್ಯಾಸಕರು ಬಿ.ಇಡಿ ವ್ಯಾಸಂಗಕ್ಕೆ ತೆರಳಿದ್ದಾರೆ. ಈ ವ್ಯಾಸಂಗ ಮುಗಿದ ಬಳಿಕ ಕಾಲೇಜಿನ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.ಕನ್ನಡ ,ರಾಜ್ಯಶಾಸ್ತ್ರ ಮತ್ತುವಾಣಿಜ್ಯಶಾಸ್ತ್ರ ಉಪನ್ಯಾಸಕರ ಹುದ್ದೆಗಳಿಗೆ ಕಾಲೇಜು ಅಭಿವೃದ್ದಿ ಸಮಿತಿ ಉಪನ್ಯಾಸಕರನ್ನು ನೇಮಕಮಾಡಿದ್ದು,ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಶಾಸಕರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago