ದಡ್ಡಲಕಾಡು ಶಾಲಾ ಕಟ್ಟಡ ಲೋಕಾರ್ಪಣೆ: ಡಾ. ಹೆಗ್ಗಡೆ ಅವರಿಗೆ ಆಹ್ವಾನ

ಬಂಟ್ವಾಳ ತಾಲೂಕಿನ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲಂತಸ್ತಿನ ಕಟ್ಟಡದ ಲೋಕಾರ್ಪಣೆ ಸಮಾರಂಭವು ಜ.5 ಮತ್ತು ಜ.6ರಂದು ನಡೆಯಲಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್‌ ಅಂಚನ್, ಸದಸ್ಯರಾದ ಸಂದೀಪ್ ಸಾಲ್ಯಾನ್, ಪುರುಷೋತ್ತಮ ಅಂಚನ್, ದೀಪಕ್ ಸಾಲ್ಯಾನ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ ಹಾಜರಿದ್ದರು.

ಸಿಎಂಗೆ ಮನವಿ:

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ದೂರದೃಷ್ಟಿಯ ಚಿಂತನೆಯಾದ 1 ಸಾವಿರ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಆಯ್ಕೆಯಾದ  ಎಲ್ಲಾ ಶಾಲೆಗಳನ್ನು  ದಡ್ಡಲಕಾಡು  ಶಾಲೆಯಂತೆ  ಅಭಿವೃದ್ದಿ ಪಡಿಸಲು ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಗೆ ಉಸ್ತುವಾರಿ ನೀಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಲಾಯಿತು. ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆದ ಅವೇಶನದ ಊಟದ ವಿರಾಮದ ವೇಳೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಸಮಿತಿಯ ರಾಜಾಧ್ಯಕ್ಷ ಪ್ರಕಾಶ್ ಅಂಚನ್ ಮನವಿ ಸಲ್ಲಿಸಿದರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಕ್, ವಿಧಾನ ಪರಿಷತ್ ಸದಸ್ಯ ಭೋಜೆಗೌಡ ಹಾಜರಿದ್ದು ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ದಡ್ಡಲಕಾಡು ಶಾಲೆಯನ್ನು ಅಭಿವೃದ್ದಿ ಪಡಿಸಿರುವ ಬಗ್ಗೆ ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದ್ದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದಡ್ಡಲಕಾಡು ಶಾಲಾ ಕಟ್ಟಡ ಲೋಕಾರ್ಪಣೆ: ಡಾ. ಹೆಗ್ಗಡೆ ಅವರಿಗೆ ಆಹ್ವಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*