ಬಂಟ್ವಾಳ ತಾಲೂಕಿನ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲಂತಸ್ತಿನ ಕಟ್ಟಡದ ಲೋಕಾರ್ಪಣೆ ಸಮಾರಂಭವು ಜ.5 ಮತ್ತು ಜ.6ರಂದು ನಡೆಯಲಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಸದಸ್ಯರಾದ ಸಂದೀಪ್ ಸಾಲ್ಯಾನ್, ಪುರುಷೋತ್ತಮ ಅಂಚನ್, ದೀಪಕ್ ಸಾಲ್ಯಾನ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ ಹಾಜರಿದ್ದರು.
ಸಿಎಂಗೆ ಮನವಿ:
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ದೂರದೃಷ್ಟಿಯ ಚಿಂತನೆಯಾದ 1 ಸಾವಿರ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಆಯ್ಕೆಯಾದ ಎಲ್ಲಾ ಶಾಲೆಗಳನ್ನು ದಡ್ಡಲಕಾಡು ಶಾಲೆಯಂತೆ ಅಭಿವೃದ್ದಿ ಪಡಿಸಲು ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಗೆ ಉಸ್ತುವಾರಿ ನೀಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಲಾಯಿತು. ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆದ ಅವೇಶನದ ಊಟದ ವಿರಾಮದ ವೇಳೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಸಮಿತಿಯ ರಾಜಾಧ್ಯಕ್ಷ ಪ್ರಕಾಶ್ ಅಂಚನ್ ಮನವಿ ಸಲ್ಲಿಸಿದರು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಕ್, ವಿಧಾನ ಪರಿಷತ್ ಸದಸ್ಯ ಭೋಜೆಗೌಡ ಹಾಜರಿದ್ದು ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ದಡ್ಡಲಕಾಡು ಶಾಲೆಯನ್ನು ಅಭಿವೃದ್ದಿ ಪಡಿಸಿರುವ ಬಗ್ಗೆ ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದ್ದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.