ಬಂಟ್ವಾಳ

ಕರಾವಳಿ ಕಲೋತ್ಸವ ಉದ್ಘಾಟನೆ, 30ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಕಲಾಪ್ರಕಾರಗಳಲ್ಲಿ ತೊಡಗಿಸಿಕೊಂಡರೆ, ಮನುಷ್ಯನ ಜೀವನ ಸುಖ, ನೆಮ್ಮದಿಯಿಂದ ಇರಲು ಸಾಧ್ಯ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಅಸೋಸಿಯೇಟ್ಸ್ ಮೈದಾನದಲ್ಲಿ ಡಿ.30ರವರೆಗೆ ನಡೆಯಲಿರುವ ಕರಾವಳಿ ಕಲೋತ್ಸವ 2018 ಉದ್ಘಾಟಿಸಿ ಅವರು ಮಾತನಾಡಿದರು.

ಜಾಹೀರಾತು

ಇದೇ ವೇಳೆ ಅವರು ಹಿರಿಯ ರಂಗಕರ್ಮಿ ಮಂಜು ವಿಟ್ಲ ಅವರನ್ನು ಕರಾವಳಿ ಸೌರಭ ಪ್ರಶಸ್ತಿ ನೀಡಿ ಸನ್ಮಾನಿಸಿದರು. ವಸ್ತುಪ್ರದರ್ಶನ ಮಳಿಗೆ, ಅಮ್ಯೂಸ್‌ಮೆಂಟ್ ಪಾರ್ಕ್ ಉದ್ಘಾಟಿಸಿದ ವಿಧಾನಪರಿಷತ್ತು ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಕಲೋತ್ಸವದಂಥ ಕಾರ್ಯಕ್ರಮಗಳು ಜನರನ್ನು ಬೆಸೆಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ ಎಂದರು.

ಈ ಸಂದರ್ಭ ಚಿಣ್ಣರ ಪ್ರಶಸ್ತಿಯನ್ನು ಭಾಗ್ಯಶ್ರೀ ಅವರಿಗೆ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಕಲೋತ್ಸವದ ಅಧ್ಯಕ್ಷ ಸುದರ್ಶನ ಜೈನ್, ಚಿಣ್ಣರ ಲೋಕದ ಸ್ಥಾಪಕ ಮೋಹನದಾಸ ಕೊಟ್ಟಾರಿ, ಗೌರವಾಧ್ಯಕ್ಷ ಪಿ.ಜಯರಾಮ ರೈ, ಗೋಲ್ಡನ್ ಪಾರ್ಕ್ ಅಸೋಸಿಯೇಟ್ಸ್ ಆಡಳಿತ ಪಾಲುದಾರ ಅಶೋಕ್ ಕುಮಾರ್ ಬರಿಮಾರ್, ಚಿಣ್ಣರೋತ್ಸವದ ಅಧ್ಯಕ್ಷ ಮಾ.ಅಭಿಷೇಕ್, ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಉಪಸ್ಥಿತರಿದ್ದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

30ರವರೆಗೆ ವೈವಿಧ್ಯಮಯ ಕಾರ್ಯಕ್ರಮ:
ಪ್ರಸಿದ್ಧ ತಂಡಗಳ ನಾಟಕ ಪ್ರದರ್ಶನ, ಪ್ರತಿಭಾಸಂಪನ್ನ ಚಿಣ್ಣರಿಂದ ನೃತ್ಯ, ಗಾಯನ, ಪ್ರತಿದಿನವೂ ವೈವಿಧ್ಯಮಯ ಕಾರ್ಯಕ್ರಮ, ರಂಗಭೂಮಿ, ಕಲೆ, ಸಾಹಿತ್ಯ, ಸಾಂಸ್ಕೃತಿಕ ರಂಗದ ಪ್ರತಿಭಾನ್ವಿತ ಸಾಧಕರಿಗೆ ಸನ್ಮಾನ, ಪ್ರಸಿದ್ಧ ಸಂಗೀತ ನಿರ್ದೇಶಕ ಮಣಿಕಾಂತ ಕದ್ರಿ ಸಹಿತ ಚಿತ್ರರಂಗದ ಗಣ್ಯರ ಆಗಮನ ಕಲೋತ್ಸವದಲ್ಲಿದೆ.

ಜಾಹೀರಾತು

ಡಿ.23, ಭಾನುವಾರ ಸಂಜೆ 4ಕ್ಕೆ ರಾಜ್ಯಮಟ್ಟದ ಫಿಲ್ಮ್ ಡ್ಯಾನ್ಸ್ ಸ್ಪರ್ಧೆ, ಗುರುವಂದನಾ ಕಾರ್ಯಕ್ರಮ, 8.30ಕ್ಕೆ ನೃತ್ಯರೂಪಕ ತುಳುನಾಡ ಐಸಿರಿ ನಡೆಯಲಿದೆ. 24ರ ಸೋಮವಾರ ಸಂಜೆ 6ಕ್ಕೆ ಭರತನೃತ್ಯವೈಭವ, ಸಂಜೆ 7ಕ್ಕೆ ನಾಟಕೋತ್ಸವ ಉದ್ಘಾಟನೆ ನಡೆಯಲಿದ್ದು, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಕರಾವಳಿ ಝೇಂಕಾರ ಜಿಲ್ಲಾ ಮಟ್ಟದ (ಸಿಂಗಾರಿ ಮೇಳ) ಚೆಂಡೆ ಸ್ಪರ್ಧೆ, ಸಂಜೆ 7ಕ್ಕೆ ಸಭಾ ಕಾರ್ಯಕ್ರಮ, ಡಿ.26, 27, 28, 29ರಂದು ಸಂಜೆ 6ಕ್ಕೆ ತುಳು ಸಿನಿಮಾಲೋಕದ ತಾರಾಸಂಗಮ ಕಲೋತ್ಸವದಲ್ಲಿರಲಿದೆ.  ಡಿ.30, ಭಾನುವಾರ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಅನ್ವೇಷಣೆ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್, ಸಂಗೀತ ನಿರ್ದೇಶಕ ಗುರುಕಿರಣ್ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭ, ಪ್ರಶಸ್ತಿ ವಿತರಣೆ. ಬಳಿಕ ರಾತ್ರಿ 8.30 ಕ್ಕೆ ನಿಕ್ಕ್ ಗೊತ್ತುಂಡಾ ತುಳು ನಾಟಕ ಪ್ರದರ್ಶನ ನಡೆಯಲಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ