ಕಡೇಶಿವಾಲಯ ಹೈಸ್ಕೂಲಿನ 10ನೇ ತರಗತಿ ವಿದ್ಯಾರ್ಥಿನಿ ಯಶಸ್ವಿ ರಾಜಸ್ತಾನದ ಜೈಪುರದಲ್ಲಿ ನಡೆದ 21ನೇ ರಾಷ್ಟ್ರೀಯ ಸೀನಿಯರ್ ಮತ್ತು ಜ್ಯೂನಿಯರ್ ಚೆಸ್ ಚಾಂಪಿಯನ್ ಶಿಪ್ ಫಾರ್ ಡೆಫ್ ನಲ್ಲಿ ಮೊದಲನೇ ಸ್ಥಾನ ಗಳಿಸಿದ್ದಾಳೆ.
ಜಾಹೀರಾತು
ಶ್ರವಣಶಕ್ತಿ ದೋಷ ಉಳ್ಳವರಿಗಾಗಿ ಡಿ.1ರಿಂದ ೫ರವರೆಗೆ ಈ ಪಂದ್ಯಾಕೂಟ ನಡೆದಿತ್ತು. ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ಶ್ರವಣಶಕ್ತಿಯ ಕೊರತೆ ಇರುವವರಿಗಾಗಿ ನಡೆದ ಅಂತಾರಾಷ್ಟ್ರೀಯ ಚೆಸ್ ಟೂರ್ನಿಯ ಮಹಿಳಾ ವಿಭಾಗದಲ್ಲಿ ಭಾಗವಹಿಸಿದ ಪುತ್ತೂರು ಜೀನಿಯಸ್ ಚೆಸ್ ಸ್ಕೂಲ್ ವಿದ್ಯಾರ್ಥಿನಿಯಾಗಿರುವ ಈಕೆ ಕಂಚಿನ ಪದಕ ಗಳಿಸಿದ್ದಳು.ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಲ್ಯಾಬ್ ಅಸಿಸ್ಟೆಂಟ್ ತಿಮ್ಮಪ್ಪ ಮೂಲ್ಯ ಮತ್ತು ಬಂಟ್ವಾಳ ತಾಲೂಕಿನ ಸರಕಾರಿ ಶಾಲಾ ಶಿಕ್ಷಕಿ ಯಶೋಧಾ ದಂಪತಿಯ ಇಬ್ಬರು ಹೆಣ್ಣುಮಕ್ಕಳಲ್ಲಿ ಎರಡನೆಯವಳು. ಈಕೆ ಕುರಿತು ಬಂಟ್ವಾಳನ್ಯೂಸ್ ವಿವರವಾದ ಲೇಖನ ಪ್ರಕಟಿಸಿತ್ತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಚೆಸ್ ಪ್ರತಿಭೆ ಯಶಸ್ವಿಗೆ ರಾಷ್ಟ್ರಮಟ್ಟದಲ್ಲಿ ಮೊದಲೇ ಸ್ಥಾನ"