ವಾಮದಪದವು

ಚೆನ್ನೈತ್ತೋಡಿ ಸ.ಹಿ.ಪ್ರಾ.ಶಾಲೆ: ಶಾಲಾ ಶತಮಾನೋತ್ಸವ ಉದ್ಘಾಟನೆ

ಬಂಟ್ವಾಳ ತಾಲೂಕು ಚೆನ್ನೈತ್ತೋಡಿ ಉನ್ನತೀಕರಿಸಿದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಶತಮಾನೋತ್ಸವದ ಸವಿನೆನಪಿಗಾಗಿ ಸುಮಾರು 10ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಭೋಜನ ಶಾಲೆಯನ್ನು ಮತ್ತು ಶತಮಾನೋತ್ಸವ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉದ್ಘಾಟಿಸಿ ಮಾತನಾಡಿ, ಕನ್ನಡ ಮಾಧ್ಯಮದ ಸರಕಾರಿ ಶಾಲೆಗಳು ಮುಚ್ಚುತ್ತಿರುವ ಕಾಲಘಟ್ಟದಲ್ಲಿ ಚೆನ್ನೈತ್ತೋಡಿ ಶಾಲೆ ಶತಮಾನೋತ್ಸವ ಆಚರಿಸುತ್ತಿರುವುದು ನಮಗೆ ಮತ್ತು ಊರವರಿಗೆ ಹೆಮ್ಮೆಯ ವಿಷಯವಾಗಿದೆ. ಈ ಶಾಲೆಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಶಾಸಕರ ನೆಲೆಯಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಈ ಶಾಲೆಯಲ್ಲಿ ಶಿಕ್ಷಣ ಪಡೆದ ಸಾವಿರಾರು ಮಂದಿ ಉನ್ನತ ಸ್ಥಾನ ಪಡೆದಿದ್ದು, ಪ್ರಸ್ತುತ ಈ ಶಾಲೆ ೩೦೮ ವಿದ್ಯಾರ್ಥಿಗಳನ್ನು ಹೊಂದಿರುವುದು ಇಲ್ಲಿನ ಜನರ ಶಾಲೆಯ ಮೇಲಿನ ಕಾಳಜಿಯ ದ್ಯೋತಕವಾಗಿದೆ. ಸಮುದಾಯದ ಒಗ್ಗೂಡುವಿಕೆಯಿಂದ ಶಾಲೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸರಕಾರಿ ಶಾಲೆಗಳ ಅಭಿವೃದ್ಧಿಗೆ ರಾಜ್ಯ ಸರಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ವಾಮದಪದವುನಲ್ಲಿ ಪ್ರಾಥಮಿಕ ಶಿಕ್ಷಣದಿಂದ ತೊಡಗಿ ಪದವಿ ಕಾಲೇಜಿನವರೆಗೆ ಸರಕಾರಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಕೊಡುಗೆ ನೀಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಚೆನ್ನೈತ್ತೋಡಿ ಗ್ರಾ.ಪಂ. ಅಧ್ಯಕ್ಷ ಯತೀಶ್ ಎಂ. ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್, ತಾ.ಪಂ. ಸದಸ್ಯೆ ರತ್ನಾವತಿ ಜೆ. ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಎನ್., ದೆಹಲಿ ಕರ್ನಾಟಕ ಭವನದ ಸುಧಾಕರ ನಾಯಕ್ ಪರಾರಿ, ಪತ್ರಕರ್ತೆ ಸುಕನ್ಯಾ ಸಂಪತ್, ಬಾಲಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನಾ ಜಿ.ಕೆ. ಭಟ್, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಹಂಝ ಎ. ಬಸ್ತಿಕೋಡಿ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪ್ರಮೀಳಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಸಮಿತಿ ಪದಾಽಕಾರಿಗಳಾದ ಡೆನಿಸ್ ಫೆರ್ನಾಂಡಿಸ್, ನಾರಾಯಣ ಶೆಟ್ಟಿ, ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ಸುನಿತ್ ರೈ ದಪ್ಪರಬಲು, ಹಳೆವಿದ್ಯಾರ್ಥಿ ಸಂಘದ ಪದಾಽಕಾರಿಗಳಾದ ನವೀನ್‌ಚಂದ್ರ ಶೆಟ್ಟಿ, ಸತೀಶ್ ಶೆಟ್ಟಿ, ಕಮಲ್ ಶೆಟ್ಟಿ, ಶ್ರೀಧರ ಪೈ, ರಾಮರಾಯ ನಾಯಕ್, ಸತೀಶ್ ಅಂತರಗುತ್ತು, ಪ್ರಕಾಶ್ ಗಟ್ಟಿ ಬಸ್ತಿಕೋಡಿ, ಚಂದ್ರಶೇಖರ ಶೆಟ್ಟಿ, ಶಾಲಾಭಿವೃದ್ಧಿ, ಶತಮಾನೋತ್ಸವ ಸಮಿತಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಈ ಹಿಂದೆ ಶಿಕ್ಷಕರಾಗಿದ್ದ 50 ಮಂದಿ ಶಿಕ್ಷಕರಿಗೆ ಮತ್ತು 10 ಮಂದಿ ಸಾಧಕರನ್ನು ಸಮ್ಮಾನಿಸಲಾಯಿತು.
ಶತಮಾನೋತ್ಸವ ಸಮಿತಿ ಅಧ್ಯಕ್ಷ ಆನಂದ ಆಚಾರ್ಯ ಸ್ವಾಗತಿಸಿದರು. ಸಮಿತಿ ಸಲಹೆಗಾರ, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಆಲದಪದವು ಗೋಪಾಲ ಅಂಚನ್ ಪ್ರಸ್ತಾವಿಸಿದರು. ಮುಖ್ಯ ಶಿಕ್ಷಕಿ ಜಾನೆಟ್ ಕೊನ್ಸೆಸೊ ವರದಿ ವಾಚಿಸಿದರು. ಕೋಶಾಽಕಾರಿ ಅನಂತ ಪೈ ವಂದಿಸಿದರು. ದೈಹಿಕ ಶಿಕ್ಷಕ ಸಂತೋಷ್ ಕುಮಾರ್ ಸಮ್ಮಾನಿತರ ವಿವರ ನೀಡಿದರು. ರಂಗ ಕಲಾವಿದ ಎಚ್ಕೆ ನಯನಾಡು, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts