ಪುಂಜಾಲಕಟ್ಟೆ

ಕಂಬಳದ ಗತವೈಭವ ಮರಳಿಸಲು ಸರ್ವಪ್ರಯತ್ನ: ಡಿ.ವಿ.ಸದಾನಂದ ಗೌಡ

click: Kishor Peraje

ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಈ ಹಿಂದಿನ ಪದ್ದತಿಯಂತೆ ಬೆತ್ತ ಹಿಡಿದು ಕಂಬಳ ನಡೆಸುವಂತಾಗಲು ಸರ್ವ ಪ್ರಯತ್ನ ನಡೆಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ಹೇಳಿದರು.

ಬಂಟ್ವಾಳ-ಬೆಳ್ತಂಗಡಿ ತಾಲೂಕುಗಳ ಗಡಿ ಭಾಗದಲ್ಲಿರುವ ಎಲಿಯನಡುಗೋಡು ಗ್ರಾಮದ ಹೊಕ್ಕಾಡಿಗೋಳಿಯಲ್ಲಿ ಶನಿವಾರ ನಡೆದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕೆರೆ ಬಯಲು ಕಂಬಳದ ಸಮಾರೋಪದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಜಾಹೀರಾತು

ಸಭಾಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಮಾತನಾಡಿ, ಕಂಬಳ ಕ್ರೀಡೆ ನಮ್ಮ ಮಣ್ಣಿನ ಸಂಸ್ಕೃತಿಯಾಗಿದ್ದು ಕೃಷಿಕರ ಜೀವನದ ಭಾಗವಾಗಿದೆ. ತುಳುನಾಡಿನಲ್ಲಿ ಗ್ರಾಮೀಣ ಜನತೆಯ ಕೃಷಿ ಚಟುವಟಿಕೆಯ ಭಾಗವಾಗಿರುವ ಕಂಬಳದಿಂದ ಜನರು ಸಂತಸ ಪಡೆಯುತ್ತಿದ್ದು ಕಾನೂನಿನ ಚೌಕಟ್ಟಿನಲ್ಲಿ ಕಂಬಳವು ವಿಜೃಂಭಿಸಲಿ ಎಂದು ಹೇಳಿದರು.

ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ, ಬಾರಾಡಿ ಕಂಬಳ ಸಮಿತಿ ಅಧ್ಯಕ್ಷ ಕಂಬಳ ಡಾ. ಜೀವಂದರ್ ಬಲ್ಲಾಳ್, ಜಿಲ್ಲಾ ಕಂಬಳ ಸಮಿತಿ ಗೌರವ ಸಲಹೆಗಾರ ಗುಣಪಾಲ ಕಡಂಬ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಅಡ್ವೆ ನಂದಿಕೂರು ಕಂಬಳ ಸಮಿತಿ ಅಧ್ಯಕ್ಷ ಕೊಳಚೂರು ಕುಂಡೊಟ್ಟು ಸುಕುಮಾರ ಶೆಟ್ಟಿ, ಬಾರಾಡಿ ಬೀಡು ಶ್ರೇಯಶ್ ಬಲ್ಲಾಳ್, ಜಪ್ಪು ಮನ್ಕುತೋಟಗುತ್ತು ಸಾಚಿ ಅನಿಲ್ ಶೆಟ್ಟಿ ಅನಿಲ ಶೆಟ್ಟಿ, ಜಿಲ್ಲಾ ಕಂಬಳ ಸಮಿತಿ ಗೌರವಾಧ್ಯಕ್ಷ ಬಾರ್ಕೂರುಗುತ್ತು ಶಾಂತಾರಾಮ ಶೆಟ್ಟಿ, ಏತಮೊಗರುಗುತ್ತು ಜಯ ಶೆಟ್ಟಿ ವೇದಿಕೆಯಲ್ಲಿದ್ದರು.

ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಕಂಬಳ ಸಮಿತಿ ಅಧ್ಯಕ್ಷ ನೋಣಾಲ್‌ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ, ಪದಾಽಕಾರಿಗಳಾದ ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಎಚ್. ಹರೀಶ್ ಹಿಂಗಾಣಿ, ಸಂದೇಶ್ ಶೆಟ್ಟಿ ಪೊಡುಂಬ, ಪುಷ್ಪರಾಜ ಜೈನ್ ನಡ್ಯೋಡಿ, ಹರಿಪ್ರಸಾದ್ ಶೆಟ್ಟಿ ಕುರ್ಡಾಡಿ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಪ್ರವೀಣ್ ಶೆಟ್ಟಿ ಮಾವಿನಕಟ್ಟೆ, ಕಿರಣ್ ಕುಮಾರ್ ಮಂಜಿಲ, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜನಾರ್ದನ ಬಂಗೇರ ತಿಮರಡ್ಡ, ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ ಎಚ್.ಹುಲಿಮೇರು, ಕೃಷ್ಣ ಶೆಟ್ಟಿ ಉಮನೊಟ್ಟು, ಉಮೇಶ್ ಶೆಟ್ಟಿ ಕೊನೆರೊಟ್ಟು, ರಾಜೇಶ್ ಶೆಟ್ಟಿ ಸಿದ್ದಕಟ್ಟೆ, ಸಾಧು ಶೆಟ್ಟಿ ಕಲ್ಲಾಪು, ಜನಾರ್ದನ ನಾಯ್ಕ್ ಸಿದ್ದಕಟ್ಟೆ, ಎಚ್.ಎ. ರೆಹಮಾನ್ ಹೊಕ್ಕಾಡಿಗೋಳಿ, ರಮೇಶ್ ಪೂಜಾರಿ ಕುಂಜಾಡಿ, ಸುರೇಶ್ ಕೆ. ಶೆಟ್ಟಿ ಹಕ್ಕೇರಿ, ಸುಽರ್ ಶೆಟ್ಟಿ ಹೊಕ್ಕಾಡಿಗೋಳಿ, ರಾಜು ಗುಮ್ಮಣ್ಣ ಶೆಟ್ಟಿ ಹೊಕ್ಕಾಡಿಗೋಳಿ, ಸುಧಾಕರ ಚೌಟ ಬಾವ ಹೊಸಬೆಟ್ಟು, ಹರೀಶ್ ಶೆಟ್ಟಿ ಹೊಕ್ಕಾಡಿಗೋಳಿ, ಟಿ.ನರಸಿಂಹ ಪೈ ಮಾವಿನಕಟ್ಟೆ, ಆನಂದ ಶೆಟ್ಟಿ ಹಕ್ಕೇರಿ, ಸಂತೋಷ್ ಮಂಜಿಲ, ಸುರೇಶ್ ಎಂ. ಶೆಟ್ಟಿ ಹಕ್ಕೇರಿ, ರಾಧಕೃಷ್ಣ ಶೆಟ್ಟಿ ಉಗ್ರೋಡಿ, ರಘುರಾಮ್ ಶೆಟ್ಟಿ ದೇವಸ್ಯ, ಭುಜಂಗ ಶೆಟ್ಟಿ ಹೊಕ್ಕಾಡಿಗೋಳಿ, ನವೀನ್ ಕುಂಜಾಡಿ, ಲೋಕನಾಥ್ ಶೆಟ್ಟಿ ಪಮುಂಜ, ಗಿರೀಶ್ ಕರ್ಪೆ, ನವೀನ ಹೆಗ್ಡೆ ಮಂಚಕಲ್ಲು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

ಈ ಸಂದರ್ಭದಲ್ಲಿ ಕಂಬಳ ಸಂಘಟಕ, ಪ್ರಧಾನ ತೀರ್ಪುಗಾರ ಬೆಳ್ಳಿಪ್ಪಾಡಿ ಮಂಜಯ್ಯ ರೈ ಅವರನ್ನು ಸಮ್ಮಾನಿಸಲಾಯಿತು.
ಸಮಿತಿ ಗೌರವ ಸಲಹೆಗಾರ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಸ್ವಾಗತಿಸಿದರು. ಜಿಲ್ಲಾ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ ಕಾರ್ಯಕ್ರಮ ನಿರೂಪಿಸಿದರು.

ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಜಿ.ಪಂ.ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಬಿ.ಪದ್ಮಶೇಖರ ಜೈನ್, ಎಪಿಎಂಸಿ ಸದಸ್ಯ ಎಂ. ಪದ್ಮರಾಜ ಬಲ್ಲಾಳ್, ತಾ. ಪಂ. ಸದಸ್ಯ ಪ್ರಭಾಕರ ಪ್ರಭು, ಆರಂಬೋಡಿ ಗ್ರಾ. ಪಂ. ಅಧ್ಯಕ್ಷ ಪ್ರಭಾಕರ ಹುಲಿಮೇರು, ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಅಧ್ಯಕ್ಷ ಎಂ.ದುರ್ಗಾದಾಸ್ ಶೆಟ್ಟಿ ಮಾವಂತೂರು, ತಾ. ಪಂ. ಮಾಜಿ ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನವೀನಚಂದ್ರ ಶೆಟ್ಟಿ, ಪಂಜಿಕಲ್ಲು ಗ್ರಾ.ಪಂ. ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಮತ್ತಿತರರು ಭಾಗವಹಿಸಿದ್ದರು.

ಜಾಹೀರಾತು

RESULT:

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 4 ಜೊತೆ
ಅಡ್ಡಹಲಗೆ: 4 ಜೊತೆ
ಹಗ್ಗ ಹಿರಿಯ: 19 ಜೊತೆ
ನೇಗಿಲು ಹಿರಿಯ: 20 ಜೊತೆ
ಹಗ್ಗ ಕಿರಿಯ: 13 ಜೊತೆ
ನೇಗಿಲು ಕಿರಿಯ: 76 ಜೊತೆ
ಒಟ್ಟು ಕೋಣಗಳ ಸಂಖ್ಯೆ : 136ಜೊತೆ
••••••••••••••••••••••••••••••••••
ಕನೆಹಲಗೆ: ಬೇಲಾಡಿ ಬಾವ ಅಶೋಕ್ ಶೆಟ್ಟಿ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
••••••••••••••••••••••••••••••••••
ಹಗ್ಗ ಹಿರಿಯ:

ಜಾಹೀರಾತು

ಪ್ರಥಮ: ಮೂಡಬಿದ್ರಿ ಕರಿಂಜೆ ವಿನು ವಿಶ್ವನಾಥ ಶೆಟ್ಟಿ “B”

ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
••••••••••••••••••••••••‌‌‌‌‌••••••••••
ಹಗ್ಗ ಕಿರಿಯ:

ಪ್ರಥಮ: ಜಪ್ಪುಮನ್ಕು ತೋಟಗುತ್ತು ಸಾಚಿ ಅನಿಲ್ ಶೆಟ್ಟಿ

ಜಾಹೀರಾತು

ದ್ವಿತೀಯ: ಮಾಣಿ ಸಾಗು ಹೊಸಮನೆ ಉಮೇಶ್ ಮಹಾಬಲ ಶೆಟ್ಟಿ
••••••••••••••••••••••••••••••••••
ನೇಗಿಲು ಹಿರಿಯ:

ಪ್ರಥಮ: ಪಟ್ಟೆ ಬಿಜ್ಜೊಟ್ಟು ಪ್ರಶಾಂತ್ ಶೆಟ್ಟಿ ” A”

ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ “A”
••••••••••••••••••••••••••••••••••
ನೇಗಿಲು ಕಿರಿಯ:

ಜಾಹೀರಾತು

ಪ್ರಥಮ: ಸಿದ್ದಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ

ದ್ವಿತೀಯ: ಮರೋಡಿ ಕೆಳಗಿನಮನೆ ಕೃತೇಶ್ ಅಣ್ಣಿ ಪೂಜಾರಿ
••••••••••••••••••••••••••••••••••
ಅಡ್ಡಹಲಗೆ:

ಪ್ರಥಮ: ಕೋಟ ಗಿಳಿಯಾರು ವಸಂತ ಕುಮಾರ್ ಶೆಟ್ಟಿ

ಜಾಹೀರಾತು

ದ್ವಿತೀಯ: ಪಾತಿಲ ಹೊಸಮನೆ ರವಿರಾಜ್ ಶೆಟ್ಟಿ
••••••••••••••••••••••••••••••••••

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ