ಬಂಟ್ವಾಳ

ಸರಿದಂತರ‌‌ ಪ್ರಕಾಶನದ ಆಶ್ರಯದಲ್ಲಿ ಸನ್ಮಾನ‌ ಕಾರ್ಯಕ್ರಮ


ಹಲವಾರು ಗಿಡ ಮರಗಳನ್ನು‌ ನೆಟ್ಟು ಪೋಷಿಸುತ್ತಿರುವ ಹಾಗೂ ಅನಿವಾರ್ಯ ಸಂದರ್ಭಗಳಲ್ಲಿ ಮರಗಳ ಸ್ಥಳಾಂತರ ಕಾರ್ಯ ಮಾಡುತ್ತಿರುವ ಪರಿಸರ ಪ್ರೇಮಿ ಜೀತ್ ಮಿಲನ್ ರೋಶ್ ಅವರನ್ನು ಬಿ.ಸಿ.ರೋಡಿನ ಸರಿದಂತರ ಪ್ರಕಾಶನದ ಆಶ್ರಯದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಮಾತನಾಡಿ ಮಾನವನಾಗಿ ಹುಟ್ಟಿದ ಮೇಲೆ ಬದುಕಿನಲ್ಲಿ ಯಾವುದೇ ಸಾಧನೆ ಮಾಡದಿದ್ದರೂ ಮುಂದಿನ ಪೀಳಿಗೆಗಾಗಿ ಗಿಡ ಮರಗಳನ್ನು ನೆಟ್ಟು ಪೋಷಿಸಿದರೆ ಅದುವೇ ಆತನ ದೊಡ್ಡ ಕೊಡುಗೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಷಶಯನ ಕಾರಿಂಜ ಮಾತನಾಡಿ ಸ್ವಚ್ಛತೆಯ ವಿಚಾರದಲ್ಲಿ ವ್ಯಕ್ತಿಯೊಬ್ಬ ತಾನು ಮಾಡುವ ಸಣ್ಣ ಪ್ರಯತ್ನವೇ ಮುಂದಕ್ಕೆ ದೊಡ್ಡ ಕ್ರಾಂತಿಯಾಗಬಹುದು ಎಂದು ಸರಿದಂತರ‌ ಪ್ರಕಾಶನ ಕೈಗೊಂಡ ಕಾರ್ಯವನ್ನು ಶ್ಲಾಘಿಸಿದರು.

ಜಾಹೀರಾತು

ಇದೇ ಸಂದರ್ಭದಲ್ಲಿ ಪ್ರಕಾಶನದ ಸಂಯೋಜಕ ರಾಜಮಣಿ ರಾಮಕುಂಜ ಪಾಟ್ ಕಾಂಪೋಸ್ಟಿಂಗ್ ಕುರಿತು ಪ್ರಾತ್ಯಕ್ಷಿಕೆ ನೀಡಿ ಅದರ ಮಹತ್ವದ ಕುರಿತು ವಿವರಿಸಿದರು.

ಪುರಸಭಾ ಸದಸ್ಯ ಲೋಲಾಕ್ಷ ಶೆಟ್ಟಿ ಉಪಸ್ಥಿತರಿದ್ದ ಬಿ.ಮೂಡ ಗ್ರಾಮದ ಪುರಸಭಾ ಸದಸ್ಯರಿಗೆ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಕುರಿತು ಎಚ್ಚರಿಕೆ‌‌ ನೀಡುವ ಫಲಕಗಳನ್ನು‌ ವಿತರಿಸಿದರು.

ಅಡ್ಕತ್ತಿಮಾರ್ ರಾಮಚಂದ್ರ‌ ಭಟ್ ಶುಭಾಶಂಸನೆಗೈದರು. ಜಗದೀಶ ಹೊಳ್ಳ ಪ್ರಾರ್ಥಿಸಿದರು. ಧಾತ್ರಿ ರಾಮಕುಂಜ ನಿರೂಪಿಸಿ, ಮೇಧಾ ರಾಮಕುಂಜ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

9 hours ago