ಜಲ್ಲಿ ಹುಡಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಉಕ್ಕುಡ ಎಂಬಲ್ಲಿ ಸೋಮವಾರ ನಡೆದಿದೆ.
ವಿಟ್ಲ ರಸ್ತೆ ಮೂಲಕ ಕೇರಳ ಕಡೆಗೆ ಜಲ್ಲಿ ಹುಡಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಉಕ್ಕುಡ ಭಜನಾ ಮಂದಿರ ಮುಂಭಾಗ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದು ರಸ್ತೆ ಉರುಳಿದೆ. ಘಟನೆಯಲ್ಲಿ ಚಾಲಕನ ತಲೆ ಗಾಯವಾಗಿದ್ದು, ವಿಟ್ಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಲ್ಲಿ ಹುಡಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)