ಬಂಟ್ವಾಳ

ಕಲ್ಲಡ್ಕ ನೇತಾಜಿ ಯುವಕ ಮಂಡಲದಿಂದ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ

ನೇತಾಜಿ ಯುವಕ ಮಂಡಲ ನಿರ್ಮಿಸಿರುವ ನೇತಾಜಿ ಸ್ಮೃತಿ ಭವನದ ಉದ್ಘಾಟನಾ ಸಮಾರಂಭ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ 70 ಕೆಜಿ ವಿಭಾಗದ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಕಲ್ಲಡ್ಕ ದ.ಕ.ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಡಿ.30ರಂದು ನಡೆಯಲಿದೆ.

ಜಾಹೀರಾತು

ಬೆಳಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ ಉದ್ಘಾಟಿಸುವರು ಎಂದು ನೇತಾಜಿ ಯುವಕ ಮಂಡಲ ಗೌರವಾಧ್ಯಕ್ಷ ನಾಗೇಶ್ ಮತ್ತು ಅಧ್ಯಕ್ಷ ಧನುಷ್ ತಿಳಿಸಿದ್ದಾರೆ.

ಸಂಜೆ ೪ಕ್ಕೆ ಮ್ಯಾಟ್ ಕಬಡ್ಡಿ ಉದ್ಘಾಟನೆ ನಡೆಯಲಿದ್ದು, ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಹಜಾಜ್ ಗ್ರೂಪ್ ಪಾಲುದಾರ ಯೂಸುಫ್ ಹಾಜಿ, ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ತಾಲೂಕು ಅಧ್ಯಕ್ಷ ಬೇಬಿ ಕುಂದರ್, ಕಾರ್ಯಾಧ್ಯಕ್ಷ ಪುಷ್ಪರಾಜ ಚೌಟ ಸಹಿತ ಪ್ರಮುಖರು ಭಾಗವಹಿಸುವರು. ರಾತ್ರಿ 11.30ಕ್ಕೆ ಸಮಾರೋಪ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ