ಕಲ್ಲಡ್ಕದಲ್ಲಿರುವ ನೇತಾಜಿ ಯುವಕ ಮಂಡಲ ನಿರ್ಮಿಸಿರುವ ನೇತಾಜಿ ಸ್ಮೃತಿ ಭವನವನ್ನು ಭಾನುವಾರ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಉದ್ಘಾಟಿಸಿದರು. ಇದೇ ವೇಳೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಭಾವಚಿತ್ರಕ್ಕೆ ಗೌರವಾರ್ಪಣೆ ಮಾಡಲಾಯಿತು.
ಈ ಸಂದರ್ಭ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಕಲ್ಲಡ್ಕದ ನೇತಾಜಿ ಯುವಕ ಮಂಡಲದಿಂದ ಹಲವಾರು ರಚನಾತ್ಮಕ ಕಾರ್ಯಚಟುವಟಿಕೆಗಳು ನಡೆದಿದ್ದು, ಕಟ್ಟಡದಿಂದ ಮತ್ತಷ್ಟು ಜನೋಪಯೋಗಿ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಹಿರಿಯ ಸದಸ್ಯ ಈಶ್ವರ ಪೂಜಾರಿ ಕಲ್ಲಗುಡ್ಡೆ ಮತ್ತು ಶ್ರಮದಾನದ ಮೂಲಕ ಗಮನ ಸೆಳೆದಿರುವ ಪಾಂಡುರಂಗ ಶೆಣೈ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು, ಯುವಕ ಮಂಡಲ ಮಾಜಿ ಅಧ್ಯಕ್ಷ ಲಿಂಗಪ್ಪ ಕರ್ಕೇರ, ದಾಮೋದರ ಮಾರ್ಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ನಳಿನಾಕ್ಷಿ ಉಪಸ್ಥಿತರಿದ್ದರು. ನೇತಾಜಿ ಯುವಕ ಮಂಡಲ ಗೌರವಾಧ್ಯಕ್ಷ ನಾಗೇಶ್ ಸ್ವಾಗತಿಸಿದರು. ಅಧ್ಯಕ್ಷ ಧನುಷ್ ವಂದಿಸಿದರು. ಉದಯ್ ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ನೇತಾಜಿ ಯುವಕ ಮಂಡಲಕ್ಕೆ ದುಡಿದ ಹಿರಿಯ ಸದಸ್ಯರನ್ನು ಗೌರವಿಸಲಾಯಿತು. ಬಳಿಕ ಸಂಜೆ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…