ಬಂಟ್ವಾಳ

ದಡ್ಡಲಕಾಡು ಶಾಲೆಗೆ ಸಾರ್ವಜನಿಕರಿಂದ ಹೊರೆಕಾಣಿಕೆ ಮೆರವಣಿಗೆ

www.bantwalnews.com ಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ ವರದಿ:

ಜಾಹೀರಾತು

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕರೆಂಕಿ ಇದರ ದತ್ತು ಯೋಜನೆಯಡಿ ನಿರ್ಮಾಣಗೊಂಡಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭ ಜ.೫ರಂದು ನಡೆಯಲಿದ್ದು ಇದರ ಪೂರ್ವಭಾವಿಯಾಗಿ   ಅದ್ದೂರಿಯ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಶುಕ್ರವಾರ ಬೆಳಿಗ್ಗೆ ನಡೆಯಿತು.

ಶಾಲೆ ಲೋಕಾರ್ಪಣೆಯ ಅಂಗವಾಗಿ ದಡ್ಡಲಕಾಡು ಬಳಿ ಹಾಕಲಾಗಿರುವ ಪೆನ್ಸಿಲ್ ಮತ್ತು ಕೈವಾರದ ಸ್ವಾಗತ ದ್ವಾರ ಜನರ ಗಮನ ಸೆಳೆಯುತ್ತಿದೆ. ಈ ಭಾಗದಿಂದ ಹೋಗುವ ಜನರು ತಮ್ಮ ಮೊಬೈಲ್‌ಗಳಲ್ಲಿ ಸೆಲ್ಪಿ ತೆಗೆದುಕೊಳ್ಳುತ್ತಿರುವ ದೃಶ್ಯ ಕಂಡು ಬಂತು.

ಮಣಿಹಳ್ಳ ಜಂಕ್ಷನ್ ಬಳಿ ಕೇಲ್ದೋಡಿಗುತ್ತು  ಕೋಟಿ ಪೂಜಾರಿ ಹೊರಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.   ಶಾಲಾ ಮಕ್ಕಳು, ವಿದ್ಯಾರ್ಥಿಗಳ ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಮೆರವಣಿಯಲ್ಲಿ ಹೆಜ್ಜೆಹಾಕಿದರು.

ಕೇರಳಚೆಂಡೆ ನಿನಾದ ಮೆರವಣಿಗೆಗೆ ವಿಶೇಷ ಮೆರುಗು ನೀಡಿತು. ವಿದ್ಯಾರ್ಥಿಗಳ ಪೋಷಕರು, ಶಾಲಾಭಿಮಾನಿಗಳು ತರಕಾರಿ ಮತ್ತಿತರ ಸಾಮಾಗ್ರಿಗಳನ್ನು ಹೊರೆಕಾಣಿಕೆಗೆ ಸಮರ್ಪಿಸಿದರು. ಈ ಸಂದರ್ಭ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ, ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್, ಕರೆಂಕಿ ಕ್ಷೇತ್ರದ ಪ್ರಧಾನ ಅರ್ಚನ ಗುರುರಾಜ್ ಭಟ್ ಪ್ರಮುಖರಾದ ಜಿ.ಆನಂದ, ಪೂವಪ್ಪ ಮೆಂಡನ್, ಪುರುಷೋತ್ತಮ ಅಂಚನ್, ನವೀನ್ ಸೇಸಗುರಿ, ವಿನೋದ್ ಕರೆಂಕಿ, ವಿಠಲ ಡಿ., ವಸಂತಗೌಡ ಹಳೆಗೇಟು ಮೊದಲಾದವರು ಹಾಜರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts