ಎಎಸ್ಪಿಯಾಗಿ ಸೈದುಲು ಅಡಾವತ್ ಅಧಿಕಾರ ಸ್ವೀಕಾರ

www.bantwalnews.com Editor: Harish Mambady

ಬಂಟ್ವಾಳ ವರದಿ: ಬಂಟ್ವಾಳ ಉಪವಿಭಾಗ ದ ಸಹಾಯಕ ಪೋಲೀಸ್  ಅಧೀಕ್ಷಕರಾಗಿ ಸೈದುಲು ಅಡಾವತ್ ಅಧಿಕಾರ ಸ್ವೀಕರಿಸಿದ್ದಾರೆ.

ಜಾಹೀರಾತು

ಈವರೆಗೆ ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಋಷಿಕೇಶ್ ಭಗವಾನ್ ಸೋನಾವಣೆ ಬೆಂಗಳೂರು ಭ್ರಷ್ಟಾಚಾರ ನಿಗ್ರಹ ದಳ ದ ಪೋಲೀಸ್ ಅಧೀಕ್ಷಕರಾಗಿ ಮುಂಭಡ್ತಿ ಹೊಂದಿ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ಬಂಟ್ವಾಳಕ್ಕೆ ನೂತನ ಎಎಸ್ಪಿ ಆಗಮಿಸಿದ್ದಾರೆ. ಮೂಲತಃ ತೆಲಂಗಾಣದವರಾದ ಇವರು 2016ರ ಬ್ಯಾಚ್, ಕರ್ನಾಟಕ ಕೇಡರ್ ನ ಐ.ಪಿ.ಎಸ್.ಅಧಿಕಾರಿಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಯೋಗಿಕ ತರಬೇತಿ ಪಡೆದಿರುವ ಅವರು, ಪ್ರಸ್ತುತ ದ.ಕ.ಜಿಲ್ಲೆಯ ಬಂಟ್ವಾಳ ಉಪವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕರಾಗಿ ನಿಯುಕ್ತಿಗೊಂಡಿದ್ದಾರೆ. ಬುಧವಾರ ಬಂಟ್ವಾಳ ಪೊಲೀಸ್ ಅಧಿಕಾರಿಗಳ ಸಭೆಯನ್ನು ಅವರು ನಡೆಸಿದ್ದು, ಈ ಸಂದರ್ಭ, ಬಂಟ್ವಾಳ ವ್ರತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬೆಳ್ತಂಗಡಿ ವ್ತತ್ತ ನಿರೀಕ್ಷಕ ಸಂದೇಶ್ ಜಿ. ಬಂಟ್ವಾಳ ಹಾಗೂ ಬೆಳ್ತಂಗಡಿ ವ್ರತ್ತ ದ ಪೋಲೀಸ್ ಉಪನಿರೀಕ್ಷಕರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಎಸ್ಪಿಯಾಗಿ ಸೈದುಲು ಅಡಾವತ್ ಅಧಿಕಾರ ಸ್ವೀಕಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*