ಮಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9ರಂದು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಅಧಿಕಾರಿ ಸಿಬ್ಬಂದಿಯನ್ನು ಹಾಗೂ ಕೆ ಎಸ್ ಆರ್ ಪಿ ,ಡಿ ಎ ಆರ್ ತುಕಡಿಗಳನ್ನು ನಿಯೋಜಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲಿಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಯಂ ಪ್ರೇರಿತ ಬಂದ್ ಆಚರಿಸುವುದನ್ನು ಹೊರತುಪಡಿಸಿ ಯಾವುದೇ ಸಂಘಟನೆಗಳ ಮುಖಂಡರಾಗಲಿ ಸಂಘಟನೆಗಳ ಸದಸ್ಯರಾಗಲಿ ಒತ್ತಾಯಪೂರ್ವಕವಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸುವುದಾಗಲಿ, ರಸ್ತೆತಡೆ ಇತ್ಯಾದಿಗಳನ್ನು ಮಾಡುವುದಾಗಲಿ, ಸಾರ್ವಜನಿಕರಿಗೆ ಉಪದ್ರವ ಕೊಡುವುದಾಗಲಿ ಕಂಡುಬಂದಲ್ಲಿ ಹಾಗೂ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮವನ್ನು ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Be the first to comment on "ಭಾರತಬಂದ್: ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದರೆ ನಿರ್ದಾಕ್ಷಿಣ್ಯ ಕ್ರಮ – ಎಸ್ಪಿ"