ಬಂಟ್ವಾಳ

ಒಂದು ಸಾವಿರ ಸರಕಾರಿ ಶಾಲೆಯಲ್ಲಿ ಆಂಗ್ಲ ಶಿಕ್ಷಣಕ್ಕೆ ಬದ್ಧ: ಭೋಜೇಗೌಡ

www.bantwalnews.com Report – ಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ:

ಜಾಹೀರಾತು

ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭ ಮಾಡುವ ನಿರ್ಧಾರದಿಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಹಿಂದೆ ಸರಿಯುವುದಿಲ್ಲ, ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ದಡ್ಡಲಾಕಡು ಶಾಲೆಯಲ್ಲಿ ಮಾಡಿದ ಸಾಧನೆಯನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವುದಾಗಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದ್ದಾರೆ.

ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಇದರ ದತ್ತುಯೋಜನೆಯಡಿ ನಿರ್ಮಾಣಗೊಂಡ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲಂತಸ್ತಿನ ಕೊಠಡಿಗಳ ಲೋಕಾರ್ಪಣೆಯ ಅಂಗವಾಗಿ ಭಾನುವಾರ ರಾತ್ರಿ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳ ಪೋಷಕರಿಗೆ ಶಾಲೆಯ ಮೇಲೆ ಇನ್ನೂ ಹೆಚ್ಚು ಅಭಿಮಾನ ಮೂಡಬೇಕು, ಪೋಷಕರು ಗಾಬರಿಯನ್ನು ತೊಡೆದುಹಾಕಬೇಕು. ಪ್ರಕಾಶ್ ಅಂಚನ್ ಅವರ ಕನಸಿನಂತೆ ಶಾಲೆ ಮುಂದುವರೆಯಲು ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಕನ್ನಡ ಪರ ಮಾತನಾಡುವವರಿಗೆ ಭಾಷಭಿಮಾನ ಬೇಕು, ನಾನು ಭಾಷಾಭಿಮಾನಿಯೇ, ಆದರೆ ಅಂಧಾಭಿಮಾನ ಇರಬಾರದು. ಪ್ರಕಾಶ್ ಅಂಚನ್ ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಬಿಡಿಸಿ ಸರ್ಕಾರಿ ಶಾಲೆಗೆ ಸೇರಿಸಿ  ಶಾಲೆಗಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಇದು ನಮ್ಮೆಲ್ಲರ ಶಾಲೆ ಎನ್ನುವ ಕಾಳಜಿ ಬೇಕು ಎಂದರು.

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅತಿಥಿಯಾಗಿ ಮಾತನಾಡಿ ಇಂಗ್ಲೀಷನ್ನು ಒಂದು ಭಾಷೆಯಾಗಿ ಕಲಿಸಿದರೆ  ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ, ಪ್ರಸ್ತುತ ದಿನಗಳಲ್ಲಿ ಇಂಗ್ಲೀಷ್ ಭಾಷೆ ಕಲಿಸುವ ಅಗತ್ಯತೆ ಹೆಚ್ಚಿದೆ ಎಂದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡಿ ಇಲ್ಲಿನ ವಿದ್ಯಾರ್ಥಿಗಳ ಪೋಷಕರು ಭಾಗ್ಯವಂತರು ಹಾಗೂ ಧೈರ್ಯಶಾಲಿಗಳು. ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಲು ಧೈರ್ಯ ತೋರಿರುವುದು ನಿಜಕ್ಕೂ ಅಭಿನಂದನೀಯ ಎಂದರು. ಪ್ರಕಾಶ್ ಅಂಚನ್ ಮಾದರಿಯಲ್ಲಿಯೇ ಬೆಳ್ತಂಗಡಿ ತಾಲೂಕಿನಲ್ಲಿ ಶಿಕ್ಷಣ ಕ್ರಾಂತಿ ಮಾಡುವ ಹಂಬಲ ನನಗೂ ಇದೆ ಎಂದು ತಿಳಿಸಿದರು.

ಮುಲ್ಕಿಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ಮಾತನಾಡಿ ವ್ಯಕ್ತಿ ಅಥವಾ ಸಂಘಟನೆಯೊಂದು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದನ್ನು ಪ್ರಕಾಶ್ ಅಂಚನ್ ರಾಜ್ಯಕ್ಕೆ ತೋರಿಸಿಕೊಟ್ಟಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಎಂಆರ್ಪಿಎಲ್ ಮುಖ್ಯ ಪ್ರಬಂಧಕಿ ವೀಣಾ ಟಿ.ಶೆಟ್ಟಿ, ಜಿಲ್ಲಾ ಪಂಚಾಯತಿ ಸದಸ್ಯ ತುಂಗಪ್ಪ ಬಂಗೇರಾಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಉದ್ಯಮಿಗಳಾದ ಶ್ರೀನಿವಾಸ ಪೂಜಾರಿಶೇಖರ್ ಅಂಚನ್ ಪಿಲ್ಕಾಜೆಗುತ್ತು, ಶ್ರೀ. ಕ್ಷೇ. . ಗ್ರಾ. ಯೋಜನೆಯ  ಮೇಲ್ವಿಚಾರಕ ರಮೇಶ್ ಎಸ್., ಶಾಲಾ ಮುಖ್ಯ ಶಿಕ್ಷಕ  ಮೌರೀಸ್ ಡಿಸೋಜಾ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಹಾಜರಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರನ್ನು ಅಭಿನಂದಿಸಲಾಯಿತು.

ಜಾಹೀರಾತು

ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು, ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ವಂದಿಸಿದರು, ಪುರುಷೋತ್ತಮ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

ದಡ್ಡಲಕಾಡು ಶಾಲೆ ಕಟ್ಟಡ ನಿರ್ಮಾಣದ ರುವಾರಿ ಶ್ರೀದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಅವರಿಗೆ ಕ್ಲಬ್ ಸದಸ್ಯರು ಗೌರವಾರ್ಪಣೆ ಸಲ್ಲಿಸಿದರು. ಸಂದರ್ಭ ಶಾಸಕರಾದ ಉಮನಾಥ ಕೋಟ್ಯಾನ್, ಹರೀಶ್ ಪೂಂಜಾ ಎಂಆರ್ಪಿಎಲ್ ಮುಖ್ಯ ಪ್ರಬಂಧಕಿ ವೀಣಾ ಟಿ.ಶೆಟ್ಟಿ, ಜಿಲ್ಲಾ ಪಂಚಾಯತಿ ಸದಸ್ಯ ತುಂಗಪ್ಪ ಬಂಗೇರಾ ಹಾಜರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ