ಬಂಟ್ವಾಳ

ಮೇಲ್ಕಾರಿನಲ್ಲಿ ಯುವವಾಹಿನಿಯಿಂದ ಅನ್ವೇಷಣಾ ರಾಷ್ಟ್ರೀಯ ಕಾರ್ಯಾಗಾರ

www.bantwalnews.com

ಬಂಟ್ವಾಳ: ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಅನ್ವೇಷಣಾ ರಾಷ್ಟ್ರೀಯ ಕಾರ್ಯಾಗಾರ ಸಹಕಾರಿ ಎಂದು ಉದ್ಯಮಿ ಸಂಜೀವ ಪೂಜಾರಿ ಗುರುಕೃಪಾ ಹೇಳಿದರು.

ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಘಟಕ ಆತಿಥ್ಯದಲ್ಲಿ ಮೇಲ್ಕಾರ್ ನ ಬಿರ್ವ ಆಡಿಟೋರಿಯಂನಲ್ಲಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ನಡೆದ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಮತ್ತು ಪುನರ್ಮನನದ ಅನ್ವೇಷಣಾ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯೆಯು ಅಪಹರಿಸಲ್ಪಡುವಂತದ್ದಲ್ಲ, ಗೆದ್ದುಕೊಳ್ಳಲು ಸಾಧ್ಯವಾಗುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ, ವಿದ್ಯಾದಾನ ಶ್ರೇಷ್ಠ ನ, ಶಿಕ್ಷಣವು ಶಿಕ್ಷೆಯಾಗಬಾರದು, ತಪಸ್ಸಾಗಬೇಕು, ಶಿಕ್ಷಣವು ಆನಂದದ ಕಲಿಕೆಯಾಗಬೇಕು ಎಂದು ಅವರು ಹೇಳಿದರು.

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಎಂ. ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ. ಯಶವಂತ ದೇರಾಜೆ, ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ಜಯಲಕ್ಷ್ಮಿ ಭುವನೇಶ್, ಉದ್ಯಮಿ ರಾಜೇಶ್ ಸುವರ್ಣ, ಯುವವಾಹಿನಿ ಬಂಟ್ವಾಳ ಘಟಕದ ಸಲಹೆಗಾರ ಬಿ.ತಮ್ಮಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ರಾಜೇಶ್ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನ್ವೇಷಣಾ ಸಂಚಾಲಕ ಶಿವಪ್ರಸಾದ್ ಸ್ವಾಗತಿಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್‌ ವಂದಿಸಿದರು. ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಾಗಾರ:

ವ್ಯಕ್ತಿತ್ವ ವಿಕಸನದ ಬಗ್ಗೆ ರಾಜೇಂದ್ರ ಭಟ್, ವೃತ್ತಿ ಮಾರ್ಗದರ್ಶನದ ಬಗ್ಗೆ ಅರವಿಂದ ಚೊಕ್ಕಾಡಿ ಹಾಗೂ ವಿದ್ಯೆ ಕೌಶಲ ಮತ್ತು ಉದ್ಯೋಗದ ಬಗ್ಗೆ ಅಭಿಜಿತ್‌ ಕರ್ಕೇರ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು.

ಸಮಾರೋಪ ಸಮಾರಂಭ:

ವಿಶ್ವವಿದ್ಯಾಲಯದ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಅತೀ ಮುಖ್ಯವಾದುದು, ಈ ಪರೀಕ್ಷೆಯಲ್ಲಿ ಯಶಸ್ವೀಯಾಗುವುದರ ಮೂಲಕ ವಿದ್ಯಾರ್ಥಿ ಜೀವನ ಸಾರ್ಥಕತೆ ಪಡೆಯುತ್ತದೆ ಎಂದು ಸಮಾರೋಪ ಸಮಾರಂಭದಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯಅಧ್ಯಕ್ಷ ಜಯಂತ್ ನಡುಬೈಲು ತಿಳಿಸಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಜಿಲ್ಲಾ ವೆನ್ ಲಾಕ್‌ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ.ಸದಾನಂದ ಪೂಜಾರಿ, ಅಮೆಚೂರ್‌ ಕಬ್ಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಬೇಬಿ ಕುಂದರ್, ಮಂಗಳೂರು ಮಹಾನಗರ ಪಾಲಿಕೆಯ ಗುತ್ತಿಗೆದಾರರಾದ ಲೋಕೇಶ್ ಪೂಜಾರಿ ಕಲ್ಲಡ್ಕ, ಬಂಟ್ವಾಳ ತಾಲೂಕು ಗ್ಯಾರೇಜು ಮಾಲಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಇಂಜಿನಿಯರ್ ಸಂತೋಷ್‌ಕುಮಾರ್‌ಕೊಟ್ಟಿಂಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಪ್ರಗತಿಪರ ಕೃಷಿಕರಾದ ಮೋಹನ್ ಪೂಜಾರಿ ಅಗ್ರಬೈಲು, ಉದ್ಯಮಿ ಸುಂದರ ಪೂಜಾರಿ ಬೊಳಂಗಡಿ, ಬಂಟ್ವಾಳ ಪುರಸಭೆಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ವಾಸು ಪೂಜಾರಿ, ಕೆ.ಡಿ.ಪಿ ಸದಸ್ಯೆ ಜಯಂತಿ.ವಿ.ಪೂಜಾರಿ, ಬಂಟ್ವಾಳ ಪುರಸಭೆಯ ಮಾಜಿ ಸದಸ್ಯ ಗೋಪಾಲ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಅಶೋಕ್‌ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿ ಸುನೀಲ್‌ ಕೆ.ಅಂಚನ್, ಯುವವಾಹಿನಿ ಬಂಟ್ವಾಳ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಯೋಗೀಶ್ ಪೂಜಾರಿ ಕಲ್ಲಡ್ಕ, ಜತೆ ಕಾರ್ಯದರ್ಶಿ ರಚನಾ ಕರ್ಕೇರ, ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿಗಳಾದ ಸುಪ್ರೀತ್, ತ್ರಿಷಿತ್, ದೀಪಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವವಾಹಿನಿ ಬಂಟ್ವಾಳ ಘಟಕದ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸುವರ್ಣ ಸ್ವಾಗತಿಸಿದರು, ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ