ಉತ್ತರ ಕನ್ನಡ ಮೂಲದ ಗಣೇಶ ( ಹೆಸರು ಬದಲಿಸಲಾಗಿದೆ) ಅವರ ತಾಯಿ ಕಳೆದ 8 ತಿಂಗಳಿನಿಂದ ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಪುತ್ರ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದು, ತಾಯಿಯ ಆರೈಕೆಗಾಗಿ ಉದ್ಯೋಗ ತ್ಯಜಿಸಿ ಮಂಗಳೂರಿಗೆ ಬಂದಿದ್ದಾರೆ. ಇದೀಗ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಾಯಿ ಆಸ್ಪತ್ರೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದರೆ ಆಸ್ಪತ್ರೆಯ ಚಿಕಿತ್ಸೆಗೆ 22 ಲಕ್ಷ ರೂ ಖರ್ಚಾಗಿದ್ದು, ಇದೀಗ ಚಿಕಿತ್ಸಾ ವೆಚ್ಚ ಭರಿಸಲು ಆಗದೆ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಅವರು ಸಾರ್ವಜನಿಕರ ನೆರವು ಕೋರಿದ್ದಾರೆ. ಕೈಲಾದಷ್ಟು ಧನಸಹಾಯ ನೀಡಿದರೆ ಚಿಕಿತ್ಸೆಗೆ ನೆರವಾದೀತು ಎಂದು ಅವರು ನಂಬಿದ್ದಾರೆ. ಅವರ ಮೊಬೈಲ್ ಸಂಖ್ಯೆ ಹೀಗಿದೆ. +918660385025.
ಸಹಾಯ ಮಾಡಲು ಇಚ್ಛಿಸುವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬ್ರೈನ್ ಹ್ಯಾಮರೇಜ್ ಚಿಕಿತ್ಸೆಗೆ ನೆರವಾಗುವಿರಾ?"
Be the first to comment on "ಬ್ರೈನ್ ಹ್ಯಾಮರೇಜ್ ಚಿಕಿತ್ಸೆಗೆ ನೆರವಾಗುವಿರಾ?"