ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಬೊಂಡಾಲದಲ್ಲಿ 14 ಮತ್ತು 15ರಂದು ನಡೆಯುವ ಎರಡು ದಿನಗಳ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಫೆ.15ರಂದು ಶ್ರೀ ದೇವಿ ಮಹಾತ್ಮೆ ಮತ್ತು ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣೆ ಹಾಗೂ ಬೊಂಡಾಲ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾತ್ರಿ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸುವರು. ಕಟೀಲ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಆಶೀರ್ವಚನ ನೀಡುವರು. ಕಟೀಲು ಮೇಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ ಶೆಟ್ಟಿ, ಮಾಜಿ ಸಚಿವ ಬಿ.ರಮಾನಾಥ ರೈ, ಬೊಂಡಾಲ ಸೀತಾರಾಮ ಶೆಟ್ಟಿ ಮತ್ತು ಭಾಸ್ಕರ ರೈ ಕುಕ್ಕುವಳ್ಳಿ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ. 14ರಂದು ಶಿವಪ್ರಭ ಪರಿಣಯ ಮತ್ತು ಭಸ್ಮಾಸುರ ಮೋಹಿನಿ ಯಕ್ಷಗಾನ ಬಯಲಾಟ ನಡೆಯುವುದು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)