ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಸಹಯೋಗದೊಂದಿಗೆ ಜ.19ರಂದು ಅಪರಾಹ್ನ 1.30ರಿಂದ ತುಳು ಸಾಹಿತ್ಯ ಕಮ್ಮಟ ನಡೆಯಲಿದೆ ಎಂದು ಅಕಾಡೆಮಿ ಸದಸ್ಯ ಎ.ಗೋಪಾಲ ಅಂಚನ್ ಮತ್ತು ಸಾಹಿತ್ಯ ಸಂಘದ ನಿರ್ದೇಶಕ ದಾಮೋದರ ಇ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಉದ್ಘಾಟಿಸುವರು. ಕಾಲೇಜಿನ ಪ್ರಾಚಾರ್ಯ ಯೂಸೂಫ್ ವಿಟ್ಲ ಅಧ್ಯಕ್ಷತೆ ವಹಿಸುವರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ರಜನಿ ಚಿಕ್ಕಯಮಠ, ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ.ಅತಿಥಿಗಳಾಗಿ ಭಾಗವಹಿಸುವರು. ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಚೇತನ್ ಮುಂಡಾಜೆ ” ತುಳು ಸಾಹಿತ್ಯ” ಎಂಬ ವಿಚಾರದಲ್ಲಿ ವಿಷಯ ಮಂಡಿಸುವರು. ನಂತರ ವಿದ್ಯಾರ್ಥಿಗಳಿಗೆ ತುಳು ಕವಿತೆ, ತುಳು ಕತೆ, ತುಳು ಪತ್ರ ಲೇಖನ ಬರೆಯುವ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರ ನಡೆಯಲಿದೆ.
ಸಂಜೆ 3.30ಕ್ಕೆ ಅಕಾಡೆಮಿ ಸದಸ್ಯೆ ವಿಜಯ ಶೆಟ್ಟಿ ಸಾಲೆತ್ತೂರು ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಅಕಾಡೆಮಿ ಸದಸ್ಯೆ ಸುಧಾ ನಾಗೇಶ್ ಪ್ರಮಾಣ ಪತ್ರ ವಿತರಿಸುವರು. ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸಲಿದ್ದಾರೆ. ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪ್ರತೀ ವಿಭಾಗದಲ್ಲಿ ಅತ್ಯುತ್ತಮ ಬರಹಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು ಎಂದು ಅಕಾಡೆಮಿ ಸದಸ್ಯ ಎ.ಗೋಪಾಲ ಅಂಚನ್ ಮತ್ತು ಕಾಲೇಜಿನ ಸಾಹಿತ್ಯ ಸಂಘದ ನಿರ್ದೇಶಕ ದಾಮೋದರ ಇ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.