ಜ.25ರಂದು ಬಂಟ್ವಾಳದಲ್ಲಿ ಉಜ್ವಲ ಫಲಾನುಭವಿಗಳ ಸಮಾವೇಶ: ನಳಿನ್

www.bantwalnews.com

ಬಂಟ್ವಾಳ ವರದಿ: ಕೇಂದ್ರ ಸರಕಾರ ಪ್ರತಿಯೊಬ್ಬ ಪ್ರಜೆಗೂ ಅನುಕೂಲವಾಗುವಂತೆ ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಅವುಗಳನ್ನು ಜನರ ಬಳಿಗೆ ತಲುಪಿಸುವ ಉದ್ದೇಶದಿಂದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊಗೆಮುಕ್ತ ಜಿಲ್ಲೆಯನ್ನಾಗಿಸುವ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಜನವರಿ 25ರಂದು ಉಜ್ವಲ ಫಲಾನುಭವಿಗಳ ಸಮಾವೇಶ ನಡೆಯಲಿದೆ.

ಜಾಹೀರಾತು

ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಚಿವರಾದ ರಮೇಶ್ ಜಿಗಜಿಣಗಿ, ಪೆಟ್ರೋಲಿಯಂ ಸಮಿತಿ ಅಧ್ಯಕ್ಷ ಪ್ರಹ್ಲಾದ ಜೋಷಿ ಸಹಿತ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿರಿವರು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಬಂಟ್ವಾಳದ ಬಿ.ಸಿರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕಾರ್ಯಕ್ರಮ ಇಡೀ ಜಿಲ್ಲೆಯ ಅಡುಗೆ ಅನಿಲ ಫಲಾನುಭವಿಗಳಿಗೆ ಸಂಬಂಧಿಸಿದ್ದಾಗಿದ್ದು, ಇದರಲ್ಲಿ ಯಾವುದಾದರೂ ಮಾಹಿತಿಯ ಕೊರತೆಯಿಂದ ಗ್ಯಾಸ್ ಸಂಪರ್ಕ ದೊರಕದವರು, ಹಲವು ವರ್ಷಗಳಿಂದ ನಾನಾ ಕಾರಣಗಳಿಂದ ಗ್ಯಾಸ್ ಸಂಪರ್ಕ ಪಡೆಯಲು ಅಸಾಧ್ಯವಾದವರು, ಕಡುಬಡವರ ಸಹಿತ ಅಡುಗೆ ಅನಿಲ ಪಡೆಯುವ ಎಲ್ಲರೂ ಭಾಗವಹಿಸಬೇಕು ಎಂದರು. ಈ ಸಂದರ್ಭ ಫಲಾನುಭವಿಗಳಿಗೆ ಮಾಹಿತಿ ಕಾರ್ಯಾಗಾರವೂ ನಡೆಯಲಿದ್ದು, ಸ್ಥಳದಲ್ಲೇ ಅರ್ಜಿ ಸ್ವೀಕಾರ ಇರಲಿದೆ. ರೇಷನ್, ಆಧಾರ್ ಕಾರ್ಡ್ ಪಡೆದುಕೊಂಡು ಬಂದು ಡಿಕ್ಲರೇಷನ್ ಗೆ ಸಹಿ ಹಾಕಿದರೆ ಗ್ಯಾಸ್ ದೊರಕುತ್ತದೆ ಎಂದು ನಳಿನ್ ಮಾಹಿತಿ ನೀಡಿದರು.

ಈ ಸಂದರ್ಭ ಫಲಾನುಭವಿಗಳನ್ನು ಗುರುತಿಸುವ ಮಾಹಿತಿ ನೀಡುವ ಕಾರ್ಯ ನಡೆಯಲಿದ್ದು, ಸುಮಾರು ೫ ಸಾವಿರಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದೆ ಎಂದು ಹೇಳಿದ ನಳಿನ್, ಪ್ರತಿಯೊಬ್ಬ ಬಡವನೂ ಅಡುಗೆ ಅನಿಲ ಉಪಯೋಗಿಸಬೇಕು ಎಂಬ ಸಂಕಲ್ಪದೊಂದಿಗೆ ಪ್ರಧಾನಿ ಖುದ್ದು ಆಸಕ್ತಿ ವಹಿಸಿದ ಯೋಜನೆ ಇದು ಎಂದರು.

22ರಂದು ಉದ್ಯೋಗಮೇಳ:

ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಜನವರಿ 22ರಂದು ಉದ್ಯೋಗಮೇಳ ನಡೆಯಲಿದ್ದು, ೭ನೇ ತರಗತಿ ಪಾಸಾದವರಿಂದ ಉನ್ನತ ವಿದ್ಯಾಭ್ಯಾಸ ಪಡೆದವರು ಇದಕ್ಕೆ ಅರ್ಹರಾಗಿರುತ್ತಾರೆ ಎಂದು ಹೇಳಿದ ನಳಿನ್, ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಮಂತ್ರಾಲಯದಿಂದ ಮೇಳ ನಡೆಯಲಿದೆ ಎಂದರು. ಉದ್ಯೋಗ ಮೇಳ ಮತ್ತು ಉಜ್ವಲ ಮೇಳ ಜನರ ಮೂಲಭೂತ ಅವಶ್ಯಕತೆಗಳಿಗನುಸಾರವಾಗಿ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ಅವರ ದೂರದೃಷ್ಟಿಯ ಫಲ ಎಂದು ಸಂಸದ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ,ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ಚುನಾವಣಾ ಸಂಚಾಲಕ ಗೋಪಾಲಕೃಷ್ಣ ಹೇರಳೆ,  ಪಕ್ಷದ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ,ಜಿ.ಆನಂದ,ಸುಲೋಚನಾ ಜಿ.ಕೆ.ಭಟ್,ರಾಧಾಕೃಷ್ಣ ರೈ ಬುಡಿಯಾರ್, ಮೋನಪ್ಪ ದೇವಸ್ಯ,ರಾಮದಾಸ್ ಬಂಟ್ವಾಳ,ಜನಾರ್ದನ ಬೊಂಡಾಲ,ದೇವಪ್ಪ ಪೂಜಾರಿ, ರಮಾನಾಥ ರಾಯಿ,ಪುರುಷೋತ್ತಮ ಶೆಟ್ಟಿ ವಾಮದಪದವು ಮೊದಲಾದವರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜ.25ರಂದು ಬಂಟ್ವಾಳದಲ್ಲಿ ಉಜ್ವಲ ಫಲಾನುಭವಿಗಳ ಸಮಾವೇಶ: ನಳಿನ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*