ಬಂಟ್ವಾಳ

ಸಾಧನೆಗಳು ಮಾನವನ ಭವಿಷ್ಯಕ್ಕೆ ದಾರಿ: ಅರವಿಂದ ಬೋಳಾರ್

www.bantwalnews.com

ಬಂಟ್ವಾಳ ವರದಿ:  ಬದುಕಿನ ವಿವಿಧ ಹಂತಗಳಲ್ಲಿ ನಾವು ಮಾಡುವ ಸಾಧನೆಗಳು ಭವಿಷ್ಯಕ್ಕೆ ದಾರಿಯಾಗುತ್ತದೆ ಎಂದು ಖ್ಯಾತ ಚಲನ ಚಿತ್ರ್ರ  ಮತ್ತು ನಾಟಕ ಕಲಾವಿದ ಅರವಿಂದ ಕೆ ಬೋಳಾರ್ ಹೇಳಿದರು.

ಜಾಹೀರಾತು

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಸಮಾರಂಭದ ಗೌರವ  ಅತಿಥಿಯಾಗಿ ಭಾಗವಹಿಸಿದ್ದ ಚಲನಚಿತ್ರ ಕಲಾವಿದ ಪ್ರಣವ್ ಹೆಗ್ಡೆ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯು ಸರಳತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಅಖಿಲಾ ಪೈ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸಿದ್ದ ಪಡಿಸಿದ ಕಾಲೇಜಿನ ಮೋಡೆಲ್‌ನ್ನು ಮುಖ್ಯ ಅತಿಥಿಗಳು ಬಿಡುಗಡೆಗೊಳಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲತೀಶ್ ಎಮ್. ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀವತ್ಸ ಅತಿಥಿಗಳ ಪರಿಚಯ ಮಾಡಿದರು. ಪದವಿ ಕಾಲೇಜಿನ ವಿದಾರ್ಥಿ ಸಂಘದ ಕಾರ್ಯದರ್ಶಿ ತೇಜಸ್ವಿ ಪಿ. ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀವಿದ್ಯಾ ಎ. ಇವರು ಸಂಘಗಳ ವರದಿಯನ್ನು ಮಂಡಿಸಿದರು. ಹಿಂದಿ ವಿಭಾಗದ ಮುಖ್ಯಸ್ಥರಾದ   ಡಾ.ಮಂಜುನಾಥ ಉಡುಪ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಲೆ| ಸುಂದರ್ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು. ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಸೌಂದರ್ಯ  ವಂದಿಸಿದರು. ವಿದ್ಯಾರ್ಥಿನಿ ಪಂಚಶ್ರೀ ಕಾರ್ಯಕ್ರಮ ನಿರೂಪಿಸಿದರು. ವಿದಾರ್ಥಿನಿ ಮಾನಸ ಪ್ರಾರ್ಥಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

15 hours ago