ಬಂಟ್ವಾಳ ವರದಿ: ಬದುಕಿನ ವಿವಿಧ ಹಂತಗಳಲ್ಲಿ ನಾವು ಮಾಡುವ ಸಾಧನೆಗಳು ಭವಿಷ್ಯಕ್ಕೆ ದಾರಿಯಾಗುತ್ತದೆ ಎಂದು ಖ್ಯಾತ ಚಲನ ಚಿತ್ರ್ರ ಮತ್ತು ನಾಟಕ ಕಲಾವಿದ ಅರವಿಂದ ಕೆ ಬೋಳಾರ್ ಹೇಳಿದರು.
ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಸಮಾರಂಭದ ಗೌರವ ಅತಿಥಿಯಾಗಿ ಭಾಗವಹಿಸಿದ್ದ ಚಲನಚಿತ್ರ ಕಲಾವಿದ ಪ್ರಣವ್ ಹೆಗ್ಡೆ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯು ಸರಳತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಅಖಿಲಾ ಪೈ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸಿದ್ದ ಪಡಿಸಿದ ಕಾಲೇಜಿನ ಮೋಡೆಲ್‌ನ್ನು ಮುಖ್ಯ ಅತಿಥಿಗಳು ಬಿಡುಗಡೆಗೊಳಿಸಿದರು.
ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲತೀಶ್ ಎಮ್. ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀವತ್ಸ ಅತಿಥಿಗಳ ಪರಿಚಯ ಮಾಡಿದರು. ಪದವಿ ಕಾಲೇಜಿನ ವಿದಾರ್ಥಿ ಸಂಘದ ಕಾರ್ಯದರ್ಶಿ ತೇಜಸ್ವಿ ಪಿ. ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀವಿದ್ಯಾ ಎ. ಇವರು ಸಂಘಗಳ ವರದಿಯನ್ನು ಮಂಡಿಸಿದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ಮಂಜುನಾಥ ಉಡುಪ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಲೆ| ಸುಂದರ್ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು. ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಸೌಂದರ್ಯ ವಂದಿಸಿದರು. ವಿದ್ಯಾರ್ಥಿನಿ ಪಂಚಶ್ರೀ ಕಾರ್ಯಕ್ರಮ ನಿರೂಪಿಸಿದರು. ವಿದಾರ್ಥಿನಿ ಮಾನಸ ಪ್ರಾರ್ಥಿಸಿದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…